ಸತೀಶ್ ಜಾರಕಿಹೊಳಿ 
ರಾಜ್ಯ

ಶಿರಾಡಿ-ಚಾರ್ಮಾಡಿ ಘಾಟ್ ಹೆದ್ದಾಗಿ ಕಾಮಗಾರಿಗಳು ಆದ್ಯತೆ ಮೇರೆಗೆ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಸೇರಿದಂತೆ ಮರಳುಗಾರಿಕೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮಂಗಳೂರು; ಶಿರಾಡಿ ಮತ್ತು ಚಾರ್ಮಾಡಿ ಘಾಟ್ ಹೆದ್ದಾರಿಗಳಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು ಜೂನ್ ವೇಳೆಗೆ ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಂಗಳವಾರ ಹೇಳಿದರು,

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಫೆಬ್ರವರಿ 21 ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಸಭೆ ನಡೆಸಲಾಗುವುದು, ಸಭೆಯಲವ್ಲಿ ದಕ್ಷಿಣ ಕನ್ನಡದಲ್ಲಿ ಬಾಕಿ ಇರುವ ರಸ್ತೆ ಕಾಮಗಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇತುವೆಗಳ ಪರಿಶೀಲನೆ ನಡೆಸಲಾಗಿದ್ದು, ಸೇತುವೆಗಳ ದುರಸ್ತಿ ಹಾಗೂ ಹೊಸ ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿ ಅನುದಾನ ಬಿಡುಗಡೆಗೊಳಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಸೇರಿದಂತೆ ಮರಳುಗಾರಿಕೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರ ಮಟ್ಟಿಗೆ ಮರಳುಗಾರಿಕೆ ವಿಚಾರ ಜಠಿಲವಾಗಿದೆ. ಸೇತುವೆಗಳ ಕೆಳಗೂ ಮರಳುಗಾರಿಕೆ ನಡೆಸುವ ಮೂಲಕ ಅವ್ಯಾಹತ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ವ್ಯಕ್ತವಾಗಿವೆ. ಈ ಬಗ್ಗೆ ಕಂದಾಯ, ಲೋಕೋಪಯೋಗಿ ಇಲಾಖೆ, ಗಣಿ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮಂಗಳೂರಿನಲ್ಲಿ ಇನ್ನೊಂದು ಸರ್ಕ್ಯೂಟ್ ಹೌಸ್ ನಿರ್ಮಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಕದ್ರಿಯಲ್ಲಿರುವ ಹೊಸ ಸರ್ಕ್ಯೂಟ್ ಹೌಸ್ ನಲ್ಲಿ ವಿಐಪಿಗಳು ಯಾವಾಗಲೂ ಬರುತ್ತಿರುತ್ತಾರೆ. ಹಾಗಾಗಿ ಅಲ್ಲಿ ಹಳೆ ಬಂಗಲೆಯನ್ನು ದುರಸ್ತಿಪಡಿಸಬೇಕು. ಹೊಸ ಬಂಗಲೆಯನ್ನು ಪ್ರಧಾನಿ ಅಥವಾ ರಾಷ್ಟ್ರಪತಿಯೇ ಮೊದಲಾದ ಅತಿ ಗಣ್ಯರಿಗಾಗಿ ಮೀಸಲಿಡಬೇಕು ಎಂದು ಶಾಸಕರು ಆಗ್ರಹಿಸಿದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿವರು ಭರವಸೆ ನೀಡಿದರು.

ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಚಾರ್ಮಾಡಿ ಘಾಟ್ ಹೆದ್ದಾರಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, ಗುತ್ತಿಗೆದಾರರು ಇನ್ನೂ ಕೆಲಸವನ್ನು ಪೂರ್ಣಗೊಳಿಸಿಲ್ಲ ಎಂದು ಹೇಳಿದರು. ಅಲ್ಲದೆ, ಮತ್ತೊಬ್ಬ ಗುತ್ತಿಗೆದಾರರಿಗೆ ಟೆಂಡರ್ ಹಸ್ತಾಂತರಿಸುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮಳೆಗಾಲ ಆರಂಭಕ್ಕೂ ಮೊದಲು ಪರ್ಯಾಯ ಟೆಂಡರ್ ಕರೆದು ಕಾಮಗಾರಿಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ