ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಪತಿ, ಪತ್ನಿ ಹಾಗೂ ಏಳು ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಮೃತರನ್ನು ಕೊಪ್ಪಳದ ಆರ್ ವೆಂಕಟೇಶ್, ಅವರ ಪತ್ನಿ ಚೈತ್ರಾ ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಎಂದು ಗುರುತಿಸಲಾಗಿದೆ.
ಇನ್ನು ಮೃತ ವೆಂಕಟೇಶ ಅವರ ಸಹೋದರ ಶ್ರೀಕಾಂತ ರೆಡ್ಡಿ ಅವರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಹೊರಟಿದ್ದ ಇಡೀ ಕುಟುಂಬ ದುರಂತ ಅಂತ್ಯಕಂಡಿದೆ.
ಅರಬೈಲ್ ಘಟ್ಟ ಬಳಿ ಲಾರಿಯೊಂದು ಓವರಟೇಕ್ ಮಾಡುವ ಭರದಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನುಜ್ಜಗುಜ್ಜಾಗಿದೆ.
ಕಾರಿಗೆ ಗುದ್ದಿದ ಲಾರಿ ಚಾಲಕ ಪ್ರಶಾಂತ್ ಕುಂಬಾರ ವಿಜಯಪುರ ಮೂಲದವರಗಿದ್ದು, ಇದೀಗ ಪ್ರಶಾಂತ್ ಕುಂಬಾರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.