ಡಿಕೆ ಶಿವಕುಮಾರ್ 
ರಾಜ್ಯ

Video: ''ದೇವರೇ ಬಂದರೂ ಅದು ಸಾಧ್ಯವಿಲ್ಲ..''- DK Shivakumar

BrandBengaluru ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ 3 ದಿನಗಳ ಕಾರ್ಯಾಗಾರ ಕಾರ್ಯಕ್ರಮವಾದ 'ನಮ್ಮ ರಸ್ತೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಡಿಕೆ ಶಿವಕುಮಾರ್ ಮಾತನಾಡಿದರು.

ಬೆಂಗಳೂರು: 2 ಅಥವಾ 3 ವರ್ಷಗಳಲ್ಲಿ ದೇವರೇ ಭೂಮಿಗಿಳಿದು ಬಂದರೂ ಈ ಸಮಸ್ಯೆ ಸರಿಪಡಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

#BrandBengaluru ಅಡಿಯಲ್ಲಿ ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಲಾದ 3 ದಿನಗಳ ಕಾರ್ಯಾಗಾರ ಕಾರ್ಯಕ್ರಮವಾದ 'ನಮ್ಮ ರಸ್ತೆ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಪಾದಚಾರಿ ಸುರಕ್ಷತೆಯನ್ನು ಸುಧಾರಿಸಲು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ವಿನ್ಯಾಸ ಅಂಶವನ್ನು ಎತ್ತಿ ತೋರಿಸುವ ಈ ಉಪಕ್ರಮದ ಹಿಂದಿನ ಉದ್ದೇಶದ ಬಗ್ಗೆ ಮಾತನಾಡಿದರು.

'ಇದಕ್ಕಾಗಿ ನಮಗೆ ಉತ್ತಮ ಸಲಹೆಗಳು ಬಂದಿವೆ, ಅದನ್ನು ಪರಿಗಣನೆಗೆ ತೆಗೆದುಕೊಂಡು ಅಭಿವೃದ್ಧಿಪಡಿಸಲಾಗುವುದು. ಈ ವಿಶಿಷ್ಟ ಅಭಿಯಾನವು ಬ್ರಾಂಡ್ ಬೆಂಗಳೂರು ನಿರ್ಮಾಣದತ್ತ ಒಂದು ಉತ್ತಮ ಹೆಜ್ಜೆಯಾಗಿದ್ದು, ಬೆಂಗಳೂರಿನಲ್ಲಿ ಸಕ್ರಿಯ ಸಾರಿಗೆ, ಆರೋಗ್ಯಕರ ಜೀವನಶೈಲಿ, ಸೈಕ್ಲಿಂಗ್ ಮತ್ತು ಹಸಿರು ಸ್ಥಳಗಳಿಗೆ ಮೀಸಲಾದ ಪ್ರತ್ಯೇಕ ಲೇನ್‌ಗಳೊಂದಿಗೆ ಪಾದಚಾರಿ ಸ್ನೇಹಿ ಬೀದಿಗಳನ್ನು ರಚಿಸುವಲ್ಲಿ ಸಹಾಯ ಮಾಡುತ್ತದೆ ಎಂದರು.

ಅಂತೆಯೇ ನಗರದಲ್ಲಿ ಮೆಟ್ರೋ ಜಾಲ, ಉಪನಗರ ರೈಲು ಸೌಲಭ್ಯಗಳು ಮತ್ತು ಬಸ್ ಸೇವೆಗಳ ತ್ವರಿತ ವಿಸ್ತರಣೆಯೊಂದಿಗೆ ಬೆಂಗಳೂರು ನಿರ್ಣಾಯಕ ಹಂತದಲ್ಲಿದೆ ಮತ್ತು ಆದ್ದರಿಂದ ಬೆಂಗಳೂರಿನ ರೋಮಾಂಚಕ ವೇಗದ ಜೊತೆಗೆ ಒಟ್ಟಾಗಿ ಬೆಳೆಯಲು ನಾವೆಲ್ಲರೂ ಪೂರ್ವಭಾವಿಯಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದರು.

ದೇವರೇ ಬಂದರೂ ಸರಿ ಮಾಡಲು ಸಾಧ್ಯವಿಲ್ಲ

ಇದೇ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ ಕುರಿತು ಮಾತನಾಡಿದ ಡಿಕೆ ಶಿವಕುಮಾರ್ ಅವರು, ''ಪ್ರತೀ ನಿತ್ಯ ನಗರದಲ್ಲಿ ಲಕ್ಷ ಲಕ್ಷ ವಾಹನಗಳು ನೋಂದಣಿಯಾಗುತ್ತಿವೆ. ಇಷ್ಟು ಪ್ರಮಾಣದ ವಾಹನಗಳು ರಸ್ತೆಗಳಿಯುತ್ತಿದ್ದರೆ, ಮೇಲಿರುವ ಭಗವಂತನೇ ಭೂಮಿಗಿಳಿದು ಬಂದರೂ 1, 2 ಅಥವಾ 3 ವರ್ಷಗಳಲ್ಲಿ ಟ್ರಾಫಿಕ್ ಸಮಸ್ಯೆಗೆ ಏನೂ ಮಾಡಲಾಗುವುದಿಲ್ಲ. ಅಂತಹ ಕಷ್ಟ ಇದೆ ಎಂದರು.

'ನಾವು ಖಂಡಿತವಾಗಿಯೂ ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸಬೇಕು. ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ರಸ್ತೆ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳ ಯೋಜನೆ ರೂಪಿಸಬೇಕು. ಆ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಸುರಂಗ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದ್ದೇವೆ. ಆದರೆ ಇದಕ್ಕೆ ಸಾಕಷ್ಟು ತಾಂತ್ರಿಕ, ಆರ್ಥಿಕ ಸಮಸ್ಯೆಗಳು ಭೂ ಒತ್ತುವರಿ ಸಮಸ್ಯೆಗಳು ಎದುರಾಗುತ್ತಿವೆ.

ಆದರೂ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿಕೊಂಡು ಮುನ್ನುಗ್ಗುತ್ತಿದ್ದೇವೆ. ಭವಿಷ್ಯದಲ್ಲಿ ಮೆಟ್ರೋ ಯೋಜನೆ ಮಾಡಿದರೆ ಅಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಿಸುವಂತೆ ಸೂಚಿಸಿದ್ದೇವೆ ಮತ್ತು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT