ಮೌಲ್ವಿ 
ರಾಜ್ಯ

Mysuru ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಗಲಭೆಗೆ ಪ್ರಚೋದನೆ ನೀಡಿದ್ದ ಮೌಲ್ವಿ ಬಂಧನ

ಮುಫ್ತಿ ಮುಸ್ತಾಕ್ ಬಂಧಿತ ಆರೋಪಿ. ಘಟನೆ ನಡೆದು 11 ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ವಿಡಿಯೋವೊಂದು ವೈರಲ್ ಆಗಿತ್ತು.

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮುಫ್ತಿ ಮುಸ್ತಾಕ್ ಬಂಧಿತ ಆರೋಪಿ. ಘಟನೆ ನಡೆದು 11 ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ವಿಡಿಯೋವೊಂದು ವೈರಲ್ ಆಗಿತ್ತು.

ಗಲಭೆಗೆ ಈ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಹೇಳಲಾಗುತ್ತಿತ್ತು. ಹೀಗಾಗಿ, ಆರೋಪಿಯ ಬಂಧನಕ್ಕೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.

ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ವೊಂದು ಒಂದು ಸಮುದಾಯವನ್ನು ಕೆರಳಿಸಿತ್ತು. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಯುವಕನೋರ್ವ ಸಂಸದ ರಾಹುಲ್ ಗಾಂಧಿ, ಉತತರಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿವಸ್ತ್ರಗೊಳಿಸಿ, ಭಾವಚಿತ್ರಕ್ಕೆ ತಲೆ ಮೇಲೆ ಮುಸ್ಲಿಮರು ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದ ಬರೆದು ಪೋಸ್ಟ್ ಮಾಡಿದ್ದ. ಇದು ಮುಸ್ಲಿಂ ಸಮುದಾಯದವರು ಕೆರಳುವಂತೆ ಮಾಡಿತ್ತು.

ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು‌. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ಈ ನಡುವೆ ಗಲಭೆಗೆ ಕಾರಣವೆಂದು ಹೇಳಲಾಗುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋದಲ್ಲಿ ಧರ್ಮ ರಕ್ಷಣೆಗೆ ಬದ್ಧತೆ ನಿನ್ನೆಯೂ ಇತ್ತು, ಇವತ್ತು ಇದೆ. ಎಲ್ಲರೂ ಘೋಷಣೆ ಕೂಗಿ, ನಾವು ಪ್ರಾಣ ಬೇಕಾದರೂ ಕೊಡುತ್ತೇವೆ. ಸದಾ ಮುಸ್ಲಿಮನ್ನು ಗುರಿ ಮಾಡಲಾಗುತ್ತಿದೆ. ಸುರೇಶ್ ಹೆಸರಿನ ನಾಯಿ, ಸುರೇಶ್ ಹೆಸರಿನ ಹರಾಮಿ ನನ್ನ ಮಾಲೀಕನ ಬಗ್ಗೆ ಕೆಟ್ಟದಾಗಿ ಪೋಸ್ಟ್​ ಮಾಡಿದ್ದಾನೆ. ಆತನನ್ನು ಕೂಡಲೇ ಬಂಧಿಸಿ. ಆತನನ್ನು ನೇಣಿಗೆ ಹಾಕಬೇಕು ಮರಣದಂಡನೆ ವಿಧಿಸಬೇಕು. ನಿಮ್ಮ ಇಚ್ಛೆ ಏನು? ಆತನಿಗೆ ಮರಣದಂಡನೆಯಾಗಬೇಕು ಎಂಬುವುದು. ಮೈಸೂರಿನ ಎಲ್ಲ ಮುಸ್ಲಿಂರು ಒಂದಾಗಿ. ಇದಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ ಎಂದು ಭಾಷಣ ಮಾಡಿದ್ದ. ಈ ವಿಡಿಯೋ ವೈರಲ್​ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT