ಕಟ್ಟಡ ಕುಸಿತ 
ರಾಜ್ಯ

ಬೆಂಗಳೂರು: ತಿಪ್ಪಸಂದ್ರದಲ್ಲಿ ಏಕಾಏಕಿ ಎರಡು ಅಂತಸ್ತಿನ ಕಟ್ಟಡ ಕುಸಿತ

ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸಂಜೆ 4:58ರ ಸುಮಾರಿಗೆ ಕಟ್ಟಡ ಕುಸಿದಿದೆ.

ಬೆಂಗಳೂರು: ಜೀವನ್ ಭೀಮಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ 2 ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದ ಘಟನೆ ಬುಧವಾರ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.

ಕಟ್ಟಡದ ಪಕ್ಕದಲ್ಲಿ ಮತ್ತೊಂದು ಕಟ್ಟಡಕ್ಕೆ ಪಾಯ ತೆಗೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸಂಜೆ 4:58ರ ಸುಮಾರಿಗೆ ಕಟ್ಟಡ ಕುಸಿದಿದೆ.

ಮನೆ ವಾಲುತ್ತಿರುವ ಕುರಿತು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಕರೆ ಬಂದಿದ್ದು, ಕೂಡಲೇ ಎರಡು ಅಗ್ನಿಶಾಮಕ ದಳದ ವಾಹನಗಳು ಎಸ್‌ಡಿಆರ್‌ಎಫ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ, ಮನೆಯಲ್ಲಿದ್ದವರನ್ನು ಹೊರಗೆ ಕಳುಹಿಸಿದೆ. ಪರಿಣಾಮ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಹಳೆಯ ಕಟ್ಟಡವಾಗಿದ್ದು, ಪಕ್ಕದ ಕಟ್ಟಡಕ್ಕೆ ಪಾಯ ಹಾಕುವ ವೇಳೆ ಈ ಕಟ್ಟಡದ ಪಾಯ ದುರ್ಬಲಗೊಂಡಿದೆ. ಇದೀಗ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದಲ್ಲಿ ಒಟ್ಟು 5 ಬಾಡಿಗೆ ಮನೆಗಳಿದ್ದವು. ಅಲ್ಲದೆ, ಒಂದು ಅಂಗಡಿ ಕೂಡ ಇತ್ತು. ಬಿರುಕು ಬಿಡುವ ಶಬ್ಧ ಕೇಳಿ ಕಟ್ಟಡದಲ್ಲಿದ್ದವರು ಮನೆಯಿಂದ ಹೊರಗೆ ಬಂದಿದ್ದಾರೆ. ಘಟನೆಯಲ್ಲಿ ಕೆಲ ದ್ವಿಚಕ್ರ ವಾಹನಗಳಿಗೆ ಹಾನಿಯಾಗಿವೆ ಎಂದು ತಿಳಿದುಬಂದಿದೆ. ಈ ಸಂಬಂಧ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್