ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿಗೆ ಬಿಸಿಲಾಘಾತ: ಈ ಮಾರ್ಚ್‌ನಲ್ಲಿ ಕಳೆದ ವರ್ಷದ ರಣಬಿಸಿಲನ್ನು ಮೀರಿಸಲಿದೆ; ಮಳೆ ಯಾವಾಗ?

ವರ್ಷಗಳು ಉರುಳುತ್ತಿದ್ದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು.

ಬೆಂಗಳೂರು: ವರ್ಷಗಳು ಉರುಳುತ್ತಿದ್ದಂತೆ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ರಣಬೀಸಿಲು ಜಾಸ್ತಿಯಾಗುತ್ತಿದೆ. ಕಳೆದ ವರ್ಷವೇ ದಾಖಲೆಯ ರಣಬಿಸಿಲು ದಾಖಲಾಗಿತ್ತು. ಸುಡು ಬಿಸಿಲಿಗೆ ಜನರು ಕಂಗೆಟ್ಟು ಹೋಗಿದ್ದರು. ಇದೀಗ ವರ್ಷವೂ ಕಳೆದ ವರ್ಷಕ್ಕಿಂತ ಹೆಚ್ಚು ಬಿಸಿಲಿರುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಶಿಯಸ್‌ ಬಿಸಿಲು ಅಧಿಕವಾಗಿದೆ. ಇದು ಹೀಗೆ ಮುಂದುವರೆದು ಮಾರ್ಚ್ ನಲ್ಲಿ ತಾಪಮಾನ ದಾಖಲೆ ಮಟ್ಟಕ್ಕೆ ಮುಟ್ಟಲಿದೆಯಂತೆ. ಇನ್ನು ಬಿಸಿಲಿನ ಜೊತೆ ಪೂರ್ವ ಮುಂಗಾರು ಋತುವಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಏಪ್ರಿಲ್ ಮೇ ಉತ್ತಮ ಮಳೆ

ಈ ಬಾರಿ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಏಪ್ರಿಲ್-ಮೇ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. ಆದರೆ, ಹಿಂಗಾರಿನಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್