ಸಂಗ್ರಹ ಚಿತ್ರ 
ರಾಜ್ಯ

ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ. ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ಶ್ರೀ ವಿಷ್ಣುವರ್ಧನ.ಎಸ್ ಎಂಬವರು ಕೇಂದ್ರ ಕಚೇರಿಗೆ ಉಲ್ಲೇಖದಂತೆ ದೂರು ಸಲ್ಲಿಸಿರುವುದು ಸರಿಯಷ್ಟೆ.

ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲಾ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲಾ ಚಾಲನಾ ಸಿಬ್ಬಂದಿಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ ಹಾಗೂ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಶಾಂತಿಗಿಂತ ರಾಜಕೀಯವೇ ಹೆಚ್ಚಾಯಿತು': ನೊಬೆಲ್ ಸಮಿತಿ ವಿರುದ್ಧ ಶ್ವೇತಭವನ ಕೆಂಡಾಮಂಡಲ!

ಚಿಕ್ಕಬಳ್ಳಾಪುರ: 'Miss U Chinna' ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

Maria Corina Machado: ನೋಬೆಲ್ ಶಾಂತಿ ಪ್ರಶಸ್ತಿ ಗೆದ್ದ ಮರಿಯಾ ಕೊರಿನಾ ಮಚಾದೊ ಕುರಿತು ಆಸಕ್ತಿಕರ ಮಾಹಿತಿ ಇಲ್ಲಿದೆ!

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

'ಇದೇ ಕೊನೆ, ಇನ್ನೆಂದೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ.. ಕರ್ನಾಟಕ 3 ಭಾಗ, ಭಾರತ 2 ಭಾಗ'.. 'ಮೋದಿ ದೇಶದ ರಕ್ಷಾ ಕವಚ': "ಬ್ರಹ್ಮಾಂಡ" ಭವಿಷ್ಯ

SCROLL FOR NEXT