ಜಗದೀಶ್ ಶೆಟ್ಟರ್ 
ರಾಜ್ಯ

ಸವದತ್ತಿ ಅಭಿವೃದ್ಧಿಗೆ 3 ಕೋಟಿ ರೂ ಅನುದಾನದ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ: ಜಗದೀಶ್ ಶೆಟ್ಟರ್

ಸವದತ್ತಿ ತಾಲೂಕಿನಲ್ಲಿ 44 ಗ್ರಾಮ ಪಂಚಾಯಿತಿಗಳಲ್ಲಿ 142 ಜನವಸತಿ ಪ್ರದೇಶಗಳ 70 ಸಾವಿರ ಮನೆಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದೆ.

ಬೆಳಗಾವಿ: ಸವದತ್ತಿ ಪ್ರದೇಶದ ಅಭಿವೃದ್ಧಿಗೆ 3 ಕೋಟಿ ರೂ.ಗಳ ಅನುದಾನ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಗುರುವಾರ ಹೇಳಿದರು.

ಸವದತ್ತಿಯಲ್ಲಿ ಗುರುವಾರ ನಡೆದ ಜನಪರ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಸಾಕಷ್ಟು ದೊಡ್ಡ ಯೋಜನೆಗಳು ಅನುಷ್ಠಾನಗೊಳ್ಳುತ್ತಿದ್ದು, ಅವುಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ಮೋದಿಯವರ ನೇತೃತ್ವದಲ್ಲಿ ಭಾರತವನ್ನು 2047ರ ಹೊತ್ತಿಗೆ ಆರ್ಥಿಕವಾಗಿ ಮುಂದುವರಿದ ಸದೃಢ ರಾಷ್ಟ್ರವನ್ನಾಗಿ ರೂಪಿಸಲು ಬೇಕಾದ ಎಲ್ಲಾ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳು, ಬೈಪಾಸ್ ರಸ್ತೆಗಳು, ಬೆಳಗಾವಿ- ರಾಯಚೂರು 6 ಲೇನ್ ಎಕ್ಸ್ಪ್ರೆಸ್ ಹೆದ್ದಾರಿ ಹೀಗೆ ಯಾವುದೇ ಕೇಂದ್ರ ಸರ್ಕಾರಗಳು ಈವರೆಗೆ ತಾರದೆ ಇರುವಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿದೆ. ಕೇಂದ್ರ ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಸವದತ್ತಿ ಕ್ಷೇತ್ರ ಅಭಿವೃದ್ಧಿಗೆ ಮೂರು ಕೋಟಿ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗಿದೆ. ಸವದತ್ತಿ ತಾಲೂಕಿನಲ್ಲಿ 44 ಗ್ರಾಮ ಪಂಚಾಯಿತಿಗಳಲ್ಲಿ 142 ಜನವಸತಿ ಪ್ರದೇಶಗಳ 70 ಸಾವಿರ ಮನೆಗಳಿಗೆ ನಲ್ಲಿ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಶ್ರೀಪಾದ ಸಬಾನಿಸ್ ಅವರು ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು,

ಮಕ್ಕಳ ಅಭಿವೃದ್ಧಿ ಯೋಜನೆಯ ಅಧಿಕಾರಿ ಸುನೀತಾ ಪಾಟೀಲ್ ಅವರು 'ಬೇಟಿ ಬಚಾವೋ ಬೇಟಿ ಪಡಾವೋ' ಮತ್ತು 'ಮಾತೃ ವಂದನಾ' ಉಪಕ್ರಮಗಳ ಬಗ್ಗೆ ಮಾತನಾಡಿದರು.

ಕಾರ್ಯಕ್ರಮಕ್ಕೂ ಮೊದಲು, ಶೆಟ್ಟರ್ ಅವರು 'ಏಕ್ ಪೆಡ್ ಮಾ ಕೆ ನಾಮ್' ಉಪಕ್ರಮದಡಿಯಲ್ಲಿ ಕಾಲೇಜು ಆವರಣದಲ್ಲಿ ಮರದ ಸಸಿಯನ್ನು ನೆಟ್ಟರು. ವಿವಿಧ ಇಲಾಖೆಗಳಿಂದ ಸ್ಥಾಪಿಸಲಾದ ಪ್ರದರ್ಶನ ಮಳಿಗೆಗಳಿಗೂ ಅವರು ಭೇಟಿ ನೀಡಿದರು. ನಂತರ ಕೇಂದ್ರ ಸರ್ಕಾರದಲ್ಲಿ ನೋಂದಾಯಿತ ಕಲಾವಿದರ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT