ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಬಿಬಿಎಂಪಿ ಮುಂದಾಗಿದ್ದು, . ಸಮೀಕ್ಷೆಯ ಮೇಲ್ವಿಚಾರಣೆಗಾಗಿ ನಗರದ ಎಲ್ಲಾ 8 ವಲಯಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಕಲಾಗಿದೆ ಎಂದು ಬಿಬಿಎಂಪಿ ಶಿಕ್ಷಣ ಇಲಾಖೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಶುಕ್ರವಾರ ಹೇಳಿದ್ದಾರೆ.
ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ರ ಪ್ರಕಾರ, ಸ್ಥಳೀಯ ಸಂಸ್ಥೆಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಶಿಕ್ಷಣ ನೋಂದಣಿಯನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆಬ್ರವರಿಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆಯನ್ನು ಕೈಗೊಂಡಿದೆ.
ಈ ಬಗ್ಗೆ ಮಾತನಾಡಿರುವ ಪ್ರೀತಿ ಗೆಹ್ಟೋಲ್ ಅವರು, ಭಾರತೀಯ ಸಂವಿಧಾನದ 21 (ಎ) ವಿಧಿಯ ಪ್ರಕಾರ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಮೂಲಭೂತ ಹಕ್ಕಾಗಿ ಶಿಕ್ಷಣದ ಹಕ್ಕನ್ನು ಖಾತರಿಪಡಿಸುತ್ತದೆ. ರಾಜ್ಯದ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು, 2012 ರ ಪ್ರಕಾರ, ಸ್ಥಳೀಯ ಸಂಸ್ಥೆಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಶಿಕ್ಷಣ ನೋಂದಣಿಯನ್ನು ನಿರ್ವಹಿಸಬೇಕಾಗುತ್ತದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಶಾಲೆಯಿಂದ ಹೊರಗುಳಿದ ಹಾಗೂ ಶಾಲೆಗೆ ದಾಖಲಾಗದ ಮಕ್ಕಳ ಬಗ್ಗೆ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಪ್ರಕ್ರಿಯೆ ಚಾಲನೆಯಲ್ಲಿರುವುದರಿಂದ ನ್ಯಾಯಲಾಯವರು ನೀಡಿರುವ ನಿರ್ದೇಶನದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವುದು ಅವಶ್ಯಕವಾಗಿದೆ. ಅದರಂತೆ ಸದರಿ ಸಮೀಕ್ಷೆಯನ್ನು ಸೆಂಟರ್ ಫಾರ್ ಇ-ಗವರ್ನೆನ್ಸ್ ಇಲಾಖಾ ವತಿಯಿಂದ ಕರ್ನಾಟಕ ಸರ್ಕಾರಿ ಆಪ್ ಸ್ಟೋರ್‌ನಲ್ಲಿ ಲಭ್ಯವಿರುವ 'ಕರ್ನಾಟಕ H2H ಮಕ್ಕಳ ಸಮೀಕ್ಷೆ ಅಪ್ಲಿಕೇಶನ್' ಎಂಬ ಮೊಬೈಲ್ ಆ್ಯಪ್ ಮೂಲಕ ಸಮೀಕ್ಷೆ ನಡೆಸಬೇಕಾಗಿರುತ್ತದೆ.
ನ್ಯಾಯಾಲಯವು ನೀಡಿರುವ ನಿರ್ದೇಸನದಂತೆ 2024-25ನೇ ಸಾಲಿಗೆ ಪಾಕಿಕೆ ವ್ಯಾಪ್ತಿಯಲ್ಲಿನ ಶಾಲೆಯಿಂದ ಹೊರಗುಳಿದ ಮಕ್ಕಳ ನಿಖರ ಸಂಖ್ಯೆಯನ್ನು ಗುರುತಿಸುವ ಸಮೀಕ್ಷೆ ಸಂಬಂಧ ವಲಯವಾಗು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸಮೀಕ್ಷೆಯನ್ನು ಫೆಬ್ರವರಿ 24 ರಿಂದ ಪ್ರಾರಂಭಿಸಲಾಗುತ್ತಿದ್ದು, ಬಿಬಿಎಂಪಿ ಮಿತಿಯಲ್ಲಿರುವ ಪ್ರತಿಯೊಂದು ಮನೆಯಲ್ಲಿಯೂ ಸಮೀಕ್ಷೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ, ಪ್ರತಿ ವಾರ್ಡ್‌ಗೆ ಸುಮಾರು ಹತ್ತು ಗಣತಿದಾರರನ್ನು ನೇಮಿಸಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.