ಗರ್ಭಿಣಿ ಮಹಿಳೆ (ಸಂಗ್ರಹ ಚಿತ್ರ) 
ರಾಜ್ಯ

ತಡರಾತ್ರಿವರೆಗೂ ಠಾಣೆಯಲ್ಲಿ ಗರ್ಭಿಣಿ ಮಹಿಳೆ ಪರದಾಟ: ನಿಯಮ-ಮಾನವೀಯತೆ ಮರೆತರೇ ನಗರದ ಪೊಲೀಸರು?

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಳೆದ ದಿನ ರಾತ್ರಿ ತಡರಾತ್ರಿಯವರೆಗೂ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ರಾತ್ರಿ 10 ಗಂಟೆವರೆಗೂ ಠಾಣೆಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯನ್ನು ಇರಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಗರ್ಭಿಣಿ ಮಹಿಳೆಯೊಬ್ಬರು ತಡರಾತ್ರಿವರೆಗೂ ಸಂಕಷ್ಟ ಅನುಭವಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಳೆದ ದಿನ ರಾತ್ರಿ ತಡರಾತ್ರಿಯವರೆಗೂ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ರಾತ್ರಿ 10 ಗಂಟೆವರೆಗೂ ಠಾಣೆಯಲ್ಲಿ ನಾಲ್ಕು ತಿಂಗಳ ಗರ್ಭಿಣಿಯನ್ನು ಇರಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ನಿಯಮದ ಪ್ರಕಾರ ಗರ್ಭಿಣಿ ಮಹಿಳೆಯನ್ನು ಸಂಜೆ ಆರು ಗಂಟೆ ಒಳಗೆ ಸಾಂತ್ವಾನ ಕೇಂದ್ರಕ್ಕೆ ಕಳುಹಿಸಬೇಕು. ಆದರೆ ರಾತ್ರಿ 10 ಗಂಟೆವರೆಗೆ ಠಾಣೆಯಲ್ಲಿಯೇ ಪೊಲೀಸರು ಗರ್ಭಿಣಿಯನ್ನು ಇರಿಸಿಕೊಂಡಿದ್ದು, ಈ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ರಾತ್ರಿ 10 ಗಂಟೆ ಬಳಿಕ ಪೊಲೀಸರಿಂದ ಸಖಿ ಕೇಂದ್ರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಲಾಗಿದೆ. ಹೀಗಾಗಿ ಪೊಲೀಸರ ಮೇಲೆ ಕರ್ತವ್ಯ ಲೋಪದ ಆರೋಪ ಕೇಳಿ ಬಂದಿದೆ.

ನಿಯಮಗಳ ಪ್ರಕಾರ ಸಂಜೆ 6 ಗಂಟೆ ನಂತರ ಯಾವುದೇ ಮಹಿಳೆಯನ್ನು ಠಾಣೆಗೆ ಕರೆತರುವಂತಿಲ್ಲ. ಜೊತೆಗೆ ಠಾಣೆಯಲ್ಲಿ ಇಟ್ಟುಕೊಳ್ಳುವಂತಿಲ್ಲ. ಆದರೆ,. ಇಲ್ಲಿ ಪೊಲೀಸರು ಆ ನಿಯಮವನ್ನು ಉಲ್ಲಂಘಿಸಿದ್ದಾರೆ. ಒಬ್ಬ ಗರ್ಭಿಣಿ ಅನ್ನೋದನ್ನು ನೋಡದೆ ಪೊಲೀಸರು ಠಾಣೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಕೆಸಿ ಜನರಲ್ ಆಸ್ಪತ್ರೆಗೆ ನಿಯಮಿತ ತಪಾಸಣೆಗಾಗಿ ನಾಲ್ಕು ತಿಂಗಳ ಗರ್ಭಿಣಿ ತೆರಳಿದ್ದು, ಈ ವೇಳೆ ಆಸ್ಪತ್ರೆಯ ವೈದ್ಯರು ಗರ್ಭಿಣಿಯ ಆಧಾರ್ ಕಾರ್ಡ್‌ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಆಕೆಗೆ ವಯಸ್ಸು 18 ವರ್ಷ, 1 ತಿಂಗಳು ಮತ್ತು 20 ದಿನಗಳು ಎಂಬುದು ಗೊತ್ತಾಗಿದೆ. ಯುವತಿ 4 ತಿಂಗಳ ಗರ್ಭಿಣಿಯಿರುವ ಕಾರಣ 18 ವರ್ಷಕ್ಕೂ ಮೊದಲೇ ಮದುವೆಯಾಗಿರುವುದು ಗೊತ್ತಾಗಿದೆ. ಅಂದರೆ ಬಾಲ್ಯವಿವಾಹವಾಗಿರುವುದು ತಿಳಿದುಬಂದಿದೆ. ಹೀಗಾಗಿ ಈ ಬಗ್ಗೆ ಶೇಷಾದ್ರಿಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆಸಿಕೊಂಡಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಪತಿ ಹಾಗೂ ಪತ್ನಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ, ಪೊಲೀಸರು ರಾತ್ರಿ ಹತ್ತು ಗಂಟೆವರೆಗೂ ಅವರನ್ನು ಕೂರಿಸಿ ಕಾಲಹರಣ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಈ ಬಗ್ಗೆ ಇಲಾಖಾ ತನಿಖೆ ಆರಂಭಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ವರದಿಯನ್ನು ಕೋರಲಾಗಿದ್ದು, ಶೇಷಾದ್ರಿಪುರಂ ಪೊಲೀಸ್ ಅಧಿಕಾರಿಗಳ ವಿರುದ್ಧದ ಆರೋಪಗಳ ತನಿಖೆ ನಡೆಸಲು ಕೇಂದ್ರ ವಿಭಾಗದ ಡಿಸಿಪಿ ಮತ್ತು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT