ಅಪಘಾತಗೊಂಡ ಕ್ರೂಸರ್  
ರಾಜ್ಯ

ಮಧ್ಯ ಪ್ರದೇಶ ಬಳಿ ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ದಾರುಣ ಸಾವು

ಕುಂಭಮೇಳದಲ್ಲಿ ಪುಣ್ಯ ಸ್ನಾನ ಮುಗಿಸಿ ವಾಪಾಸಾಗುವಾಗ ಅಪಘಾತ ಸಂಭವಿಸಿದೆ.

ಬೆಳಗಾವಿ: ಮಧ್ಯ ಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಜಬಲ್ಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗಿನ ಜಾವ ಫೋರ್ಸ್ ತೂಫಾನ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಕುಂಭಮೇಳದಲ್ಲಿ ಪುಣ್ಯ ಸ್ನಾನ ಮುಗಿಸಿ ವಾಪಾಸಾಗುವಾಗ ಅಪಘಾತ ಸಂಭವಿಸಿದೆ.

ಅಪಘಾತವಾದ ನಂತರ ಬಸ್ ಚಾಲಕ ಸ್ವಲ್ಪ ಸಮಯ ಬಸ್ ನಿಲ್ಲಿಸಿ ನಂತರ ಅಲ್ಲಿಂದ ತೆರಳಿದ್ದಾನೆ. ಬಸ್ ಪತ್ತೆ ಹಚ್ಚಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ