ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!

ಸಾಮಾನ್ಯವಾಗಿ ಶಿವರಾತ್ರಿಯ ನಂತರ ಚಳಿಗಾಲ ಕೊನೆಗೊಂಡು ಬೇಸಿಗೆ ಆರಂಭವಾಗುತ್ತದೆ.

ಬೆಂಗಳೂರು: ಸಾಮಾನ್ಯವಾಗಿ ಮಾರ್ಚ್ ತಿಂಗಳ ಆರಂಭದಲ್ಲಿ ಉದ್ಯಾನಗರಿಯಲ್ಲಿ ಅಧಿಕೃತವಾಗಿ ಬೇಸಿಗೆ ಆರಂಭವಾಗುತಿತ್ತು. ಆದರೆ ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಬಿರು ಬೇಸಿಗೆಯ ಅನುಭವವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬೆಂಗಳೂರು ನಗರದಲ್ಲಿ ಭಾನುವಾರ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕನಿಷ್ಠ ತಾಪಮಾನ 19.7 ಡಿಗ್ರಿ ಇತ್ತು.

ಬೆಂಗಳೂರಿನಲ್ಲಿ ಒಣ ಹವೆ ಇರುತ್ತದೆ ಎಂದು IMD ಮುನ್ಸೂಚನೆ ನೀಡಿದ್ದು, ಜನರು ಬೇಸಿಗೆಯ ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಶಿವರಾತ್ರಿಯ ನಂತರ ಚಳಿಗಾಲ ಕೊನೆಗೊಂಡು ಬೇಸಿಗೆ ಆರಂಭವಾಗುತ್ತದೆ. ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿದ್ದು, ಫೆಬ್ರವರಿಯಲ್ಲಿ ಬೇಸಿಗೆಯಂತೆ ಭಾಸವಾಗುತ್ತಿದೆ.

ಸುಡುವ ಬಿಸಿಲಿಯಿಂದ ಮಧ್ಯಾಹ್ನದ ಸಮಯದಲ್ಲಿ ಹೊರ ಹೋಗುವುದನ್ನು ಕಡಿಮೆ ಮಾಡಿದ್ದೇನೆ. ಒಂದು ವೇಳೆ ಹೊರಗೆ ಹೋಗಬೇಕಾದರೆ ಸನ್‌ಸ್ಕ್ರೀನ್ ಹಚ್ಚಿ, ಛತ್ರಿ ಮತ್ತು ನೀರಿನ ಬಾಟಲಿ ಕೊಂಡೊಯ್ಯುತ್ತೇನೆ ಎಂದು ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಹೇಳಿದರು.

ಈ ವಾರ ರಾಜ್ಯದ ಕರಾವಳಿ ಕರ್ನಾಟಕಲ್ಲಿ ಹಗರು ಮಳೆಯಾದರೂ ಬೆಂಗಳೂರಿನಲ್ಲಿ ಒಣ ಹವೆ ಇರುತ್ತದೆ ಎಂದು IMD ಬೆಂಗಳೂರಿನ ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 27 ರವರೆಗೆ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಮಂಜು ಮುಸುಕಿದ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video