ಬೆಳಗಾವಿ: ಬಸ್ ಕಂಡಕ್ಟರ್ ಮಹಾದೇವ ಹುಕ್ಕೇರಿ ಮೇಲಿನ ಹಲ್ಲೆ ಹಾಗೂ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ, ಇಲ್ಲಿನ ರಾಣಿ ಚೆನ್ನಮ್ಮನ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ, ಪ್ರವೀಣ ಶೆಟ್ಟಿ ಬಣಗಳ ಕಾರ್ಯಕರ್ತರು ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ರಾಣಿ ಚನ್ನಮ್ಮ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕನ್ನಡ ಪರ ಕಾರ್ಯಕರ್ತರು ಕನ್ನಡ ಬಾವುಟಗಳನ್ನು ಹಿಡಿದು ಎಂಇಎಸ್, ಶಿವಸೇನೆ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಆರಂಭದಲ್ಲಿ ಪ್ರತಿಭಟನೆಗೆ ಮುಂದಾದ ಪ್ರವೀಣ ಶೆಟ್ಟಿ ಹಾಗೂ ಅವರ ಬಣದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬಳಿಕ ಆಗಮಿಸಿದ ಕ.ರ.ವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವ ಹುಕ್ಕೇರಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಬಳಿಕ ರಾಣಿ ಚೆನ್ನಣಿ ವೃತ್ತದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬಾಳೇಕುಂದ್ರಿ ಚಲೋ ಗೆ ಮುಂದಾದ ನಾರಾಯಣಗೌಡ ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮನವೊಲಿಸುವಲ್ಲಿ ಯಶಸ್ವಿಯಾದರು. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಗೌಡ, ಕಂಡಕ್ಟರ್ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕರ್ನಾಟಕದಿಂದ ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎನ್ನುವುದು ತೀರ್ಮಾನವಾಗಿದೆ. ಆದಾಗ್ಯೂ, MES ಪುಂಡರು, ಮರಾಠಿ, ಮಹಾರಾಷ್ಟ್ರ ಮುಂದಿಟ್ಟುಕೊಂಡು ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ಮಾಡುತ್ತಿದ್ದಾರೆ. ಶಿವಸೇನೆ ಕಿತ್ತೋದ ಶಿವಸೇನೆ. ಶಿವ ಹೆಸರು ಯಾಕೆ ಇಟ್ಟುಕೊಂಡಿದ್ದೀರಿ, ಮಹಾರಾಷ್ಟ್ರದ ಗುಂಡಾ ಸೇನೆ ಎಂದು ಹೆಸು ಇಟ್ಟುಕೊಳ್ಳಿ ಎಂದು ವಾಗ್ದಾಳಿ ನಡೆಸಿದ ಅವರು, ಗುಂಡಾಗಳಿಗೆ ಇಲ್ಲಿಂದಲ್ಲೇ ಉತ್ತರ ಕೊಡಬೇಕು ಎಂದು ಬಂದಿದ್ದೇವೆ. ಪುಂಡಾಟಕ್ಕೆ ಕೊನೆ ಆಗಬೇಕು. ಪುಂಡರನ್ನು ಗೂಂಡಾ ಕಾಯ್ದೆ ಹಾಕಿ ಬಂಧಿಸಿ ಜೈಲಿಗೆ ಕಳುಹಿಸಿ ಎಂದು ಒತ್ತಾಯಿಸಿದರು.
ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎನ್ನುವುದು ತೀರ್ಮಾನವಾಗಿದೆ. ಆದಾಗ್ಯೂ, MES ಪುಂಡರು, ಮರಾಠಿ, ಮಹಾರಾಷ್ಟ್ರ ಮುಂದಿಟ್ಟುಕೊಂಡು ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ ಮಾಡುತ್ತಿದ್ದಾರೆ.ಶಿವಸೇನೆ ಕಿತ್ತೋದ ಶಿವಸೇನೆ. ಶಿವ ಹೆಸರು ಯಾಕೆ ಇಟ್ಟುಕೊಂಡಿದ್ದೀರಿ, ಮಹಾರಾಷ್ಟ್ರದ ಗುಂಡಾ ಸೇನೆ ಎಂದು ಹೆಸು ಇಟ್ಟುಕೊಳ್ಳಿ ಎಂದು ವಾಗ್ದಾಳಿ ನಡೆಸಿದ ಅವರು, ಗುಂಡಾಗಳಿಗೆ ಇಲ್ಲಿಂದಲ್ಲೇ ಉತ್ತರ ಕೊಡಬೇಕು ಎಂದು ಬಂದಿದ್ದೇವೆ. ಪುಂಡಾಟಕ್ಕೆ ಕೊನೆ ಆಗಬೇಕು. ಪುಂಡರನ್ನು ಗೂಂಡಾ ಕಾಯ್ದೆ ಹಾಕಿ ಬಂಧಿಸಿ ಜೈಲಿಗೆ ಕಳುಹಿಸಿ ಎಂದು ಒತ್ತಾಯಿಸಿದರು.
ಇಲ್ಲಿನ ಜನಪ್ರತಿನಿಧಿಗಳನ್ನು ಕೇವಲ ಮರಾಠಿಗರು, ಎಂಇಎಸ್ನವರು ಆಯ್ಕೆ ಮಾಡಿ ಕಳುಹಿಸಿಲ್ಲ. ಎಲ್ಲ ಕನ್ನಡಿಗರೂ ಮತ ಹಾಕಿದ್ದಾರೆ. ಹಾಗಾಗಿ, ಹಲ್ಲೆಗೊಳಗಾದ ಕನ್ನಡಿಗ ಕಂಡಕ್ಟರ್ ಪರವಾಗಿ ನೀವು ನಿಲ್ಲಬೇಕು. ಅದನ್ನು ಬಿಟ್ಟು ಮರಾಠಿ ವೋಟ್ ಬ್ಯಾಂಕ್ಗಾಗಿ ಕನ್ನಡಿಗರನ್ನು ಬಲಿ ಕೊಡುವ ಕೆಲಸ ಮಾಡಿದರೆ ಕ.ರ.ವೇಯ ದೊಡ್ಡ ಹೋರಾಟವನ್ನು ಇಲ್ಲಿನ ಇಬ್ಬರು ಸಚಿವರು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕನ್ನಡಿಗರ ಸಹನೆ ಪರೀಕ್ಷೆ ಮಾಡುವುದು ಸರಿಯಲ್ಲ. ಕನ್ನಡಿಗರು ಸಹಜೀವನ ಬಯಸುವವರು. ಅದನ್ನು ನ್ಯೂನ್ಯತೆ ಎಂದು ಭಾವಿಸಿದರೆ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ನಿರ್ವಾಹಕ ವಿರುದ್ಧ ಸುಳ್ಳು ಫೋಕ್ಸೊ ಪ್ರಕರಣ ದಾಖಲಿಸಿಕೊಂಡು ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದರು. ಈ ಮಧ್ಯ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧ ಫೋಕ್ಸೊ ಪ್ರಕರಣ ದಾಖಸಿಕೊಂಡು ಬೆಳಗಾವಿ ಮಾರಿಹಾಳ ಪೊಲೀಸ್ ಠಾಣೆಯ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಎಂಬವರನ್ನು ಪೊಲೀಸ್ ಆಯುಕ್ತ ಯಡಾ ಮಾರ್ಟಿನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.