ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಉದ್ಯಾನವನಗಳಲ್ಲಿನ ಬೋರ್‌ವೆಲ್‌ಗಳ ಸ್ಥಿತಿ-ಗತಿ ಕುರಿತು ವರದಿ ಸಲ್ಲಿಸಿ: ಅಧಿಕಾರಿಗಳಿಗೆ BBMP ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಇ-ಖಾತಾ, ಉದ್ಯಾನವನಗಳು, ಕೆರೆಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಪಾಲಿಕೆ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ಯಾನವನಗಳಲ್ಲಿನ ಬೋರ್‌ವೆಲ್‌ಗಳ ಸ್ಥಿತಿ-ಗತಿಗಳ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಇ-ಖಾತಾ, ಉದ್ಯಾನವನಗಳು, ಕೆರೆಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಪಾಲಿಕೆ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.

ಬೋರ್‌ವೆಲ್‌ಗಳು ಉತ್ತಮ ಸ್ಥಿತಿಯಲ್ಲಿರುವ ಉದ್ಯಾನವನಗಳಲ್ಲಿ ತಕ್ಷಣವೇ ನೀರು ಸರಬರಾಜು ಮಾಡಬೇಕು. ಈ ನಿಟ್ಟಿನಲ್ಲಿ, ಉದ್ಯಾನವನಗಳಲ್ಲಿನ ಸಸಿಗಳು/ಮರಗಳಿಗೆ ಟ್ಯಾಂಕರ್‌ಗಳ ಮೂಲಕ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಸಂಸ್ಕರಿಸಿದ ನೀರನ್ನು ವ್ಯವಸ್ಥೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.

ಬೇಸಿಗೆ ಕಾಲ ಪ್ರಾರಂಭವಾಗುತ್ತಿದ್ದು, ಉದ್ಯಾನವನಗಳು, ಕೆರೆಗಳು ಮತ್ತು ಸಸಿಗಳು/ಮರಗಳಿಗೆ ನೀರಿನ ಅಗತ್ಯವಿದೆ. ಈ ನಿಟ್ಟಿನಲ್ಲಿ, ಅಗತ್ಯವಿರುವ ನೀರಿನ ಪ್ರಮಾಣ ಮತ್ತು ಅಗತ್ಯವಿರುವ ಟ್ಯಾಂಕರ್‌ಗಳ ಸಂಖ್ಯೆಯನ್ನು ತಕ್ಷಣವೇ ಪಟ್ಟಿ ಮಾಡಿ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ನಗರದಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಬಹಳಷ್ಟು ಮರ-ಗಿಡಗಳ ಎಲೆಗಳು ಉದುರುತ್ತಿವೆ. ಎಲ್ಲೆಡೆ ಒಣಗಿದ ಎಲೆಗಳ ರಾಶಿಗಳಿವೆ. ಈ ನಿಟ್ಟಿನಲ್ಲಿ, ನಿರ್ದಿಷ್ಟ ಸ್ಥಳಗಳನ್ನು ಗುರುತಿಸಿ, ಎಲೆಗಳನ್ನು ತೆರವುಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಾಕೀತು ಮಾಡಿದರು.

ನಗರದಲ್ಲಿ 1,280 ಉದ್ಯಾನವನಗಳಿದ್ದು, ಅವುಗಳಲ್ಲಿ 100 ಉದ್ಯಾನವನಗಳಲ್ಲಿ ಎಲೆ ಗೊಬ್ಬರ ಘಟಕಗಳನ್ನು (ಎಲೆಗಳ ಗೊಬ್ಬರ ಯಂತ್ರಗಳು) ಸ್ಥಾಪಿಸಲಾಗುತ್ತಿದೆ. ಈ ಕುರಿತ ಕಾಮಗಾರಿ ಕೆಲಸ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ನಂತರ, ಉದ್ಯಾನವನಗಳಲ್ಲಿ ಸಸಿಗಳು/ಮರಗಳಿಂದ ಬೀಳುವ ಎಲೆಗಳನ್ನು ಸ್ಥಳದಲ್ಲೇ ಗೊಬ್ಬರವಾಗಿಸಿ ಉದ್ಯಾನವನಗಳಲ್ಲಿ ಸಸಿಗಳು ಮತ್ತು ಮರಗಳನ್ನು ಬೆಳೆಸಲು ಗೊಬ್ಬರವಾಗಿ ಬಳಸಲಾಗುತ್ತದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT