ಡಿ.ಕೆ ಶಿವಕುಮಾರ್ 
ರಾಜ್ಯ

ಬೆಂಗಳೂರು ಜಲಮಂಡಳಿ ಸುಪರ್ದಿಗೆ ನೀರು ಶುದ್ಧೀಕರಣ ಘಟಕಗಳ ಹಸ್ತಾಂತರಿಸುವಂತೆ ಡಿ.ಕೆ ಶಿವಕುಮಾರ್ ಸೂಚನೆ

“ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ.

ಬೆಂಗಳೂರು: ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಶುದ್ದ ಕುಡಿಯುವ ನೀರಿನ ಘಟಕಗಳ (ಆರ್.ಓ ಪ್ಲಾಂಟ್ ಗಳ) ನಿರ್ವಹಣೆಯ ಹೊಣೆಯನ್ನು ಬೆಂಗಳೂರು ಜಲಮಂಡಳಿಗೆ ಹಸ್ತಾಂತರ ಮಾಡಲು ಸೂಕ್ತ ಆದೇಶ ಹೊರಡಿಸಿ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಬಗ್ಗೆ ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಬೆಂಗಳೂರು ನಗರದ ನಾಗರೀಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತಿದೆ. ಆದರೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ.

ಈಗ ಬೇಸಿಗೆ ಆರಂಭವಾಗುತ್ತಿದ್ದು, ಒಂದು ವೇಳೆ ಕೊಳವೆಬಾವಿಗಳು ಬತ್ತಿ ಹೋದರೆ ಆರ್.ಓ. ಘಟಕಗಳಿಗೆ ಬೇಕಾಗುವ ನೀರನ್ನು ಬೆಂಗಳೂರು ಜಲಮಂಡಳಿ ಮುಖಾಂತರವೇ ಪೂರೈಸಬೇಕಾಗುತ್ತದೆ. ನೀರು ಸರಬರಾಜು ಮಾಡುವ ಕುರಿತು ಎರಡು ಸಂಸ್ಥೆಗಳ ನಡುವೆ ಯಾವುದೇ ರೀತಿಯ ಸಮನ್ವಯದ ಕೊರತೆ ಉಂಟಾದರೂ ನಾಗರೀಕರಿಗೆ ತೊಂದರೆಯಾಗುತ್ತದೆ. ಆದ ಕಾರಣಕ್ಕೆ ಈ ಅನಾನುಕೂಲತೆ ತಪ್ಪಿಸುವ ದೃಷ್ಟಿಯಿಂದ ಬಿಬಿಎಂಪಿಗೆ ಸೇರಿದ ಎಲ್ಲಾ ಆರ್.ಓ. ಪ್ಲಾಂಟ್ ಗಳನ್ನು ಬೆಂಗಳೂರು ಜಲಮಂಡಳಿಯೇ ನಿರ್ವಹಣೆ ಮಾಡುವುದು ಸೂಕ್ತ” ಎಂದು ಡಿಸಿಎಂ ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರ ಸಂಚಾರ ಕೈಗೊಂಡು ಪರಿಶೀಲಿಸಿದ ವೇಳೆ ಬೆಂಗಳೂರು ನಗರದ ಕೆಲವು ಆರ್.ಓ. ಪ್ಲಾಂಟ್ ಗಳು ಕೆಲಸ ಮಾಡದೇ ಇರುವುದನ್ನು ಗಮನಿಸಿದ್ದರು. ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT