ಡಾ. ಕೆ ಕೆಂಪೇಗೌಡ 
ರಾಜ್ಯ

ಮೈಸೂರು: ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ.ಕೆಂಪೇಗೌಡ ವಿಧಿವಶ

ಕನ್ನಡ ಉಪಭಾಷೆಗಳ ಅಧ್ಯಯನ ಸೇರಿದಂತೆ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದ ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನರಾಗಿದ್ದಾರೆ.

ಮೈಸೂರು: ಕನ್ನಡ ಉಪಭಾಷೆಗಳ ಅಧ್ಯಯನ ಸೇರಿದಂತೆ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದ ಕನ್ನಡದ ಖ್ಯಾತ ಭಾಷಾವಿಜ್ಞಾನಿ ಡಾ. ಕೆ ಕೆಂಪೇಗೌಡ ನಿಧನರಾಗಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಚನ್ನಪಟ್ಟಣದ ಹೆಚ್ ಬ್ಯಾಡ್ರಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ಕೆಂಪೇಗೌಡ ಜನಿಸಿದ್ದರು. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶೆಟ್ಟಿಹಳ್ಳಿಯಲ್ಲಿ ಮಾಧ್ಯಮಿಕ ಮತ್ತು ಚನ್ನಪಟ್ಟಣದಲ್ಲಿ ಹೈಯರ್ ಸೆಕೆಂಡರಿ ಶಿಕ್ಷಣ ಪಡೆದರು. ಮೈಸೂರು ವಿಶ್ವವಿದ್ಯಾಲಯದಿಂದ ಹಿಂದಿ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ನಂತರ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಭಾಷಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

A Descriptive Analysis of Irula Dialect ಈ ವಿಷಯ ಕುರಿತು ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪದವಿ ಪಡೆದರು. ಸಾಮಾನ್ಯ ಭಾಷಾ ವಿಜ್ಞಾನ ಕೃತಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಿ.ಲಿಟ್. ಪದವಿ ಪಡೆದರು. ಭಾಷಾ ವಿಜ್ಞಾನ ಕೋಶ, ಧ್ವನಿಮಾ ವಿಜ್ಞಾನ, ಸಾಮಾನ್ಯ ಭಾಷಾ ವಿಜ್ಞಾನ, ಕನ್ನಡ ಭಾಷಾ ಚರಿತ್ರೆ, ತೌಲನಿಕ ದ್ರಾವಿಡ ಭಾಷಾ ವಿಜ್ಞಾನಕ್ಕೆ ಸಂಬಂಧಿಸಿದ ಅನೇಕ ಲೇಖನಗಳನ್ನು ಕನ್ನಡಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!