ಪರಮೇಶ್ವರ್, ಡಿಕೆ ಶಿವಕುಮಾರ್ 
ರಾಜ್ಯ

ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ: ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಿದ್ದು ಪರಮೇಶ್ವರ್ ಎಂದ ಡಿಕೆಶಿ!

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.

ನವದೆಹಲಿ: ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಹೊರೆಯಾಗಿವೆ ಎಂಬ ಮಾತುಗಳು ಕಾಂಗ್ರೆಸ್ ಸರ್ಕಾರದ ಸಚಿವರಿಂದಲೇ ಬರುತ್ತಿವೆ.

ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆ ಎಂದಿರುವ ಗೃಹ ಸಚಿವ ಪರಮೇಶ್ವರ್ ಅವರೇ ಪರಮೇಶ್ವರ ಅವರೇ ಕಾಂಗ್ರೆಸ್ ಪ್ರಣಾಳಿಕೆ ಸಿದ್ದಪಡಿಸಿದ್ದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಂದು ರೀತಿಯ ಲೇವಡಿ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಕುರಿತು ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ ಎಂದು ಮಂಗಳವಾರ ಹೇಳಿದರು.

ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು. ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ,’’ ಎಂದು ಶಿವಕುಮಾರ್ ಹೇಳಿದರು. ‘ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗಿವೆ ಎಂಬ ಗೃಹ ಸಚಿವರ ಹೇಳಿಕೆಗೆ ಉಪಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

ಗ್ಯಾರಂಟಿ ಯೋಜನೆಗಳಿಂದ ಹೊರೆ ಆಗುತ್ತಿರುವುದು ನಿಜ. ಅದು ಗೊತ್ತಿದ್ದೇ ನಾವು ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಈ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಎಂದು ಪರಮೇಶ್ವರ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!