ಇಶಾ ಫೌಂಡೇಶನ್ ನಲ್ಲಿ ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್  online desk
ರಾಜ್ಯ

ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, Amit shah ಜೊತೆ ವೇದಿಕೆ ಹಂಚಿಕೆ; ಇದೆಲ್ಲಾ ಸರಿ ಅಲ್ಲ... DK Shivakumar ಗೆ ಹೈಕಮಾಂಡ್ ವಾರ್ನಿಂಗ್!

ಕಾಂಗ್ರೆಸ್ ನಲ್ಲಿ ಸಿಎಂ ಆಗಬೇಕೆಂಬ ಮಹತ್ವಾಕಾಂಕ್ಷೆ ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ ಅವರ ಈ ನಡೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ.

ಬೆಂಗಳೂರು: ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ನಡೆಯುತ್ತಿರುವ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ಈಗ ದೇಶಾದ್ಯಂತ ಭಾರಿ ಸುದ್ದಿಯಾಗತೊಡಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಆಗಬೇಕೆಂಬ ಮಹತ್ವಾಕಾಂಕ್ಷೆ ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ ಅವರ ಈ ನಡೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ.

ಕುಂಭಮೇಳಕ್ಕೆ ಹೋಗಿದ್ದಕ್ಕೆ, ಇಶಾ ಫೌಂಡೇಶನ್ ಗೆ ಹೋಗುತ್ತಿರುವುದಕ್ಕೆ ಸಮಾಜಿಕ ಜಾಲತಾಣಗಳಲ್ಲಿ ಬಂದಿರುವ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ್ದ ಡಿಕೆ ಶಿವಕುಮಾರ್, ನಾನು ಕುಂಭ ಮೇಳವನ್ನು ಯೋಗಿ ಸರ್ಕಾರ ಅದ್ಭುತವಾಗಿ ಆಯೋಜಿಸಿದೆ, ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದು ಹೇಳಿದ್ದರು.

ಈ ಹೇಳಿಕೆ ಬೆನ್ನಲ್ಲೆ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಡಿಕೆ ಶಿವಕುಮಾರ್ ಗೆ ಬಹಿರಂಗ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಪಕ್ಷದ ತತ್ವ ಸಿದ್ದಾಂತ ಹಾಗೂ ರಾಹುಲ್ ಗಾಂಧಿ ಅವರ ತತ್ವಕ್ಕೆ ವಿರುದ್ದವಾದ ನಡೆ ಎಂದು ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಪಿವಿ ಮೋಹನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅಮಿತ್ ಶಾ ಅವರೊಂದಿಗೆ ಭಾಗಿಯಾಗುತ್ತಿರುವುದನ್ನು ವಿರೋಧಿಸಿರುವ ಪಿವಿ ಮೋಹನ್, ನಮ್ಮ ನಾಯಕ ರಾಹುಲ್ ಗಾಂಧೀಜಿ ಅವರನ್ನು ಅಪಹಾಸ್ಯ ಮಾಡುವ, ಯಾವಾಗಲೂ ಆರ್‌ಎಸ್‌ಎಸ್‌ನ ನಿರೂಪಣೆಗಳೊಂದಿಗೆ ಹೊಂದಿಕೆಯಾಗುವ ವ್ಯಕ್ತಿ (ಇಶಾ ಫೌಂಡೇಶನ್) ಗೆ ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿದ್ದುಕೊಂಡು, ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ, ಇದೆಲ್ಲಾ ಸರಿ ಅಲ್ಲ ಎಂದು ಹೇಳಿದ್ದಾರೆ.

ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿಯಾಗಬಾರದು. ದೃಢನಿಶ್ಚಯಕ್ಕೆ ಬದ್ಧತೆ ಬಹಳ ಮುಖ್ಯ, ಇದನ್ನು ನಿರ್ಲಕ್ಷಿಸಿದರೆ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು ಎಂದು ಪಿವಿ ಮೋಹನ್ ಎಚ್ಚರಿಕೆ ನೀಡಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!