ಸಾಂದರ್ಭಿಕ ಚಿತ್ರ 
ರಾಜ್ಯ

ಕೆಮಿಕಲ್ ಪದಾರ್ಥಗಳ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ ಗ್ರಾಮದ ಅನಿಲ ಸಂಗ್ರಹಣಾ ಘಟಕದ ಬಳಿ ಇರುವ ಕೆಮಿಕಲ್ ಮಿಶ್ರಿತ ಹಳೆ ಪದಾರ್ಥಗಳ ಗೋದಾಮಿನಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್ ಪದಾರ್ಥಗಳ ಗೋದಾಮಿನಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ ಗ್ರಾಮದ ಅನಿಲ ಸಂಗ್ರಹಣಾ ಘಟಕದ ಬಳಿ ಇರುವ ಕೆಮಿಕಲ್ ಮಿಶ್ರಿತ ಹಳೆ ಪದಾರ್ಥಗಳ ಗೋದಾಮಿನಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

ಮೈಸೂರು ಮೂಲದ ವ್ಯಕ್ತಿ ಜುಬಲಿಯಂಟ್ ಕಾರ್ಖಾನೆಯಿಂದ ಕೆಮಿಕಲ್ ಮಿಶ್ರಿತ ಹಳೆ ಟ್ಯಾಂಕರ್ ಮತ್ತು ಇತರೆ ಪದಾರ್ಥಗಳನ್ನು ತಂದು ಸಂಗ್ರಹಿಸಿಟ್ಟಿದ್ದು, ಇದಕ್ಕಿದ್ದಂತೆ ಈ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕಾವು ಹೆಚ್ಚಾಗುತ್ತಿದ್ದಂತೆ ಕೆಮಿಕಲ್ ಮಿಶ್ರಿತ ಹಳೆ ಟ್ಯಾಂಕ್ ವೊಂದು ಸ್ಫೋಟಗೊಂಡಿದೆ. ಇದರ ಶಬ್ದಕ್ಕೆ ಗ್ರಾಮಸ್ಥರು ಆತಂಕಗೊಂಡು, ಮನೆಗಳಿಂದ ರಸ್ತೆಗಳಿಗೆ ಓಡಿ ಬಂದಿದ್ದಾರೆ.

ಬಳಿಕ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ನಡುವೆ ಗ್ರಾಮದ ಒಳಭಾಗದಲ್ಲಿರುವ ಗ್ಯಾಸ್ ಕೆಮಿಕಲ್ ಮಿಶ್ರಿತ ಗೋದಾಮುಗಳನ್ನು ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT