ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ವಿವಿಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ: ಕಲಬುರಗಿ ಪೊಲೀಸರಿಂದ ಕಿಂಗ್​​ಪಿನ್ ಬಂಧನ

ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ.

ರಾಜೀವ ಸಿಂಗ್ ಆರೋರಾ
Lingaraj Badiger
Updated On : 27 Feb 2025, 5:03 pm

ಕಲಬುರಗಿ: ದೇಶದ ವಿವಿಧ ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಕಿಂಗ್ ಪಿನ್​​ನನ್ನು ಕಲಬುರಗಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಿದ್ದಾರೆ.

ರಾಜೀವ ಸಿಂಗ್ ಆರೋರಾ ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

Also Read

ಸಿಸಿಬಿ ಭರ್ಜರಿ ಕಾರ್ಯಾಚರಣೆ: SSLC-PUC ನಕಲಿ ಅಂಕಪಟ್ಟಿ ಜಾಲ ಪತ್ತೆ, ಮೂವರ ಬಂಧನ

ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್​​ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ.

ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್​​​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments