ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಪ್ರಕರಣಗಳು ಪತ್ತೆ 
ರಾಜ್ಯ

ರಾಯಚೂರು, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆ; ಆರೋಗ್ಯ ಇಲಾಖೆ ಕಟ್ಟೆಚ್ಚರ

ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರು: ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ನಂತರ, ಆರೋಗ್ಯ ಇಲಾಖೆ ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ರಾಯಚೂರಿನ ಮಾನ್ವಿ ತಾಲ್ಲೂಕು, ಚಿಕ್ಕಬಳ್ಳಾಪುರ ತಾಲ್ಲೂಕು ಮತ್ತು ಬಳ್ಳಾರಿಯ ಸಂಡೂರು ತಾಲ್ಲೂಕಿನಲ್ಲಿ ಕೋಳಿಗಳಲ್ಲಿ ಹಕ್ಕಿ ಜ್ವರ (H5N1 ಏವಿಯನ್ ಇನ್ಫ್ಲುಯೆಂಜಾ) ಕಂಡುಬಂದಿದ್ದು, ಹಲವಾರು ಕೋಳಿಗಳು ಸಾವಿಗೀಡಾಗಿವೆ. ಆದರೆ, ರಾಜ್ಯದಲ್ಲಿ ಈವರೆಗೆ ಮನುಷ್ಯರಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಅವರು ಹೇಳಿದರು.

ಪಶು ಸಂಗೋಪನಾ ಇಲಾಖೆ ಸತ್ತ ಕೋಳಿಗಳ ಮಾದರಿಗಳನ್ನು ಸಂಗ್ರಹಿಸಿ ಭೋಪಾಲ್‌ನ ಕೇಂದ್ರ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಹಕ್ಕಿ ಜ್ವರದಿಂದ ಪಕ್ಷಿಗಳು ಸಾವಿಗೀಡಾಗಿರುವುದಾಗಿ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಹಕ್ಕಿ ಜ್ವರ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಪಶುಸಂಗೋಪನಾ ಇಲಾಖೆಯು ಹಕ್ಕಿ ಜ್ವರ ಪ್ರಕರಣಗಳು ಕಂಡುಬಂದ ಸ್ಥಳದ ಸುತ್ತಲಿನ 3 ಕಿ.ಮೀ ಪ್ರದೇಶದಲ್ಲಿನ ಕೋಳಿಗಳನ್ನು ಸಾಮೂಹಿಕವಾಗಿ ಕೊಲ್ಲಲು ನಿರ್ಧರಿಸಲಾಗಿದೆ.

'ನಾವು ಕಣ್ಗಾವಲು ಹೆಚ್ಚಿಸಿದ್ದೇವೆ ಮತ್ತು ಹಕ್ಕಿ ಜ್ವರ ಪ್ರಕರಣಗಳು ಪತ್ತೆಯಾದ ಹತ್ತಿರದ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಹಾಸಿಗೆಗಳ ಸೌಲಭ್ಯಗಳನ್ನು ಸ್ಥಾಪಿಸಿದ್ದೇವೆ' ಎಂದು ಅವರು ಹೇಳಿದರು.

ಸಾರ್ವಜನಿಕರು ಭಯಭೀತರಾಗುವ ಅಗತ್ಯವಿಲ್ಲ. ರಾಜ್ಯದ ಆರೋಗ್ಯ ಮತ್ತು ಪಶುಸಂಗೋಪನೆ ಇಲಾಖೆಗಳು ಜಂಟಿಯಾಗಿ ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

SCROLL FOR NEXT