ಪುಸ್ತಕ ಮೇಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌: ಸಿಎಂ ಸಿದ್ದರಾಮಯ್ಯ

ಇದೇ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯ ಓದುವುದರಿಂದ ಮನುಷ್ಯನು ಮಾನವೀಯತೆ ಮೆರೆಯುತ್ತಾನೆ. ಹೀಗಾಗಿ ಪ್ರತಿಯೊಬ್ಬರು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರಹೇಳಿದರು.

ಇದೇ ಮೊದಲ ಬಾರಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿರುವ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು. ವಿಧಾನಸೌಧದಲ್ಲಿ ಓದುಗರು, ಸಾಹಿತ್ಯಾಭಿಮಾನಿಗಳಿಗೆ ಸಂತೆ ಏರ್ಪಡಿಸಲಾಗಿದ್ದು, ಸಾಹಿತ್ಯಾಸಕ್ತರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇದೊಂದು ಉತ್ತಮ ಬೆಳವಣಿಗೆ ಮುಂದೆ ಪ್ರತಿ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕೋತ್ಸವ ನಡೆಯಲಿದ್ದು, ಪ್ರತಿಯೊಬ್ಬರೂ ಪುಸ್ತಕ ಖರೀದಿಸಿ, ಮನೆಯಲ್ಲಿ ಗ್ರಂಥಾಲಯ ಹೊಂದಬೇಕು. ಇದರಿಂದ ಮಕ್ಕಳು ಮೊಬೈಲ್, ಡಿಜಿಟಲ್ ವ್ಯಸನದಿಂದ ಮುಕ್ತಿ ಹೊಂದಬೇಕು ಎಂದು ಸಲಹೆ ನೀಡಿದರು.

ಪುಸ್ತಕ ಮೇಳ ಆಯೋಜಿಸಿದ್ದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಶಾಸಕರು ಅವರ ನಿಧಿಯಿಂದ ರೂ.2 ಲಕ್ಷವರೆಗಿನ ಪುಸ್ತಕಗಳನ್ನು ಖರೀದಿಸಲು ಅವಕಾಶವಿದೆ. ಈ ಪುಸ್ತಕಗಳನ್ನು ತಮ್ಮ ಕ್ಷೇತ್ರಗಳ ಸಾರ್ವಜನಿಕ ಗ್ರಂಥಾಲಯಗಳು ಮತ್ತು ಶಾಲೆಗಳಿಗೆ ವಿತರಿಸಲಾಗುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುಸ್ತಕ ಕೊಳ್ಳುವವರಿಗೆ ರಿಯಾಯಿತಿ ದರದಲ್ಲಿ ಪುಸ್ತಕಗಳು ಸಿಗಲಿವೆ ಎಂದರು.

ಸೋಮವಾರದಿಂದ ಕಲಾಪ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದೂ ಇದೇ ವೇಳೆ ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ, ಗೋವಾದ ದಾಮೋದರ ಮೌಜೊ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರೆ ಸಾಹಿತಿಗಳನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT