ವಾಟಾಳ್ ನಾಗರಾಜ್ 
ರಾಜ್ಯ

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ; ಮಾ. 22 ರಂದು ಕರ್ನಾಟಕ ಬಂದ್

ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ.

ಬೆಂಗಳೂರು: ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ ಖಂಡಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಘೋಷಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ.

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಗೂ ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಅಲ್ಲದೆ ಮಾರ್ಚ್ 11 ರಂದು ಮೇಕೆದಾಟಿಗಾಗಿ ಅತ್ತಿಬೆಲೆ ತಮಿಳುನಾಡು ಗಡಿ ಬಂದ್, ಮಾ.14 ರಾಮನಗರ ಮಂಡ್ಯ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ಮತ್ತು ಮಾ.17 ರಂದು ಹೊಸಕೋಟೆ – ಚೆನ್ನೈ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಕರ್ನಾಟಕ ಬಂದ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಬೆಂಬಲ ಕೊಡಬೇಕು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಇಲಾಖೆಯ ಎಲ್ಲ ಬಸ್​ಗಳನ್ನು ಅಂದು ನಿಲ್ಲಿಸಬೇಕು. ನಮಗೆ ಹೋಟೆಲ್ ಮಾಲೀಕರು, ಸಿನಿಮಾ ರಂಗದವರು, ಸರ್ಕಾರಿ ನೌಕರರು, ದೊಡ್ಡ ಹಾಗೂ ಸಣ್ಣ ವಾಹನಗಳ(ಲಾರಿ, ಖಾಸಗಿ ಬಸ್, ಕಾರು, ವ್ಯಾನ್) ಮಾಲೀಕರು ನಮಗೆ ಬೆಂಬಲ ಸೂಚಿಸಬೇಕು ಎಂದು ವಾಟಾಳ್ ಮನವಿ ಮಾಡಿದ್ದಾರೆ.

ಮರಾಠರಿಗೆ ಸರಿಯಾದ ಪಾಠ ಕಲಿಸಬೇಕಿದೆ. ಹೀಗಾಗಿ ಕರ್ನಾಟಕ ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಗಳು ಸಂಪೂರ್ಣ ಬೆಂಬಲ ನೀಡಬೇಕು ಎಂದು ವಾಟಳ್ ನಾಗರಾಜ್ ಅವರು ಹೇಳಿದ್ದಾರೆ.

ಬಂದ್ ಹಾಗೂ ಬೆಳಗಾವಿ ಚಲೋ ನಡೆಸುವ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ವಾಟಾಳ್ ನಾಗರಾಜ್, ಸಾರಾ ಗೋವಿಂದು, ಕರವೇ ಪ್ರವೀಣ್ ಶೆಟ್ಟಿ, ಕನ್ನಡ ಕುಮಾರ್, ಜಯಕರ್ನಾಟಕ ರಾಜ್ಯಾಧ್ಯಕ್ಷ ಜಗದೀಶ್, ಗಿರೀಶ್ ಗೌಡ, ರೂಪೇಶ್ ರಾಜಣ್ಣ ಸೇರಿ ಅನೇಕ ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯೂಯಾರ್ಕ್ ನಲ್ಲೇ ನಿಮ್ಮ ಬುಡ ಗಟ್ಟಿ ಇಲ್ಲ; ಇನ್ನು ನಮ್ಮ ದೇಶದ ಅಧಿಕಾರ ಬದಲಾಯಿಸ್ತೀರಾ?: ಟ್ರಂಪ್ ಬಗ್ಗೆ ಇರಾನ್ ಅಪಹಾಸ್ಯ!

ಕೇಂದ್ರದಿಂದ ಅಸಹಕಾರ, ಮಲತಾಯಿ ಧೋರಣೆ, ಆದರೂ ವಿತ್ತೀಯ ಶಿಸ್ತು ಪಾಲನೆ: CM ಸಿದ್ದರಾಮಯ್ಯ

UPSC ಪರೀಕ್ಷೆ ಫಲಿತಾಂಶ ಪ್ರಕಟ: ಕಿರಣ್ ಕಾಮತೆ ರಾಜ್ಯಕ್ಕೆ ಟಾಪರ್; ಕರ್ನಾಟಕದ 22 ಅಭ್ಯರ್ಥಿಗಳು ಪಾಸ್

ಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!

ಸುಖೋಯ್ ವಿಮಾನ ದುರಂತ: Op Sindoor ನಲ್ಲಿ ಪಾಕ್ ಗೆ ನಡುಕ ಹುಟ್ಟಿಸಿದ್ದ ಹುತಾತ್ಮ ಪೈಲಟ್ Purvesh Duragkar

SCROLL FOR NEXT