ಮೃತ ಪ್ರಮೋದ್ 
ರಾಜ್ಯ

ಹಾಸನ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಹೇಮಾವತಿ ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ

ಪ್ರಮೋದ್‌ ಹಾಗೂ ಅವರ ಪತ್ನಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಆಕೆಯ ತಮ್ಮಂದಿರು ಅವರಿಗೆ ಕಿರುಕುಳ ನೀಡುತ್ತಿದ್ದರು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ಇಂಜಿನಿಯರ್ ಒಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾಸನದ ಇಂದಿರಾನಗರದ ನಿವಾಸಿ ಪ್ರಮೋದ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಮೋದ್‌ ಹಾಗೂ ಅವರ ಪತ್ನಿ ನಡುವೆ ಪದೇ ಪದೇ ಜಗಳವಾಗುತ್ತಿತ್ತು. ಆಕೆಯ ತಮ್ಮಂದಿರು ಅವರಿಗೆ ಕಿರುಕುಳ ನೀಡುತ್ತಿದ್ದರು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಡಿ.29 ರಂದು ಸಂಜೆ ಪ್ರಮೋದ್ ಮನೆಯಲ್ಲಿಯೇ ಮೊಬೈಲ್ ಬಿಟ್ಟು ತೆರಳಿದ್ದರು. ಪ್ರಮೋದ್‌ಗಾಗಿ ಪೋಷಕರು ಹುಡುಕಾಟ ನಡೆಸಿದ್ದು, ನಂತರ ಕೆ.ಆರ್.ಪುರಂ ಪೊಲೀಸ್ ಠಾಣೆಗೆ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಅಂದು ರಾತ್ರಿ ಹೇಮಾವತಿ ನದಿಯ ಸೇತುವೆ ಬಳಿ ಪ್ರಮೋದ್ ಬೈಕ್ ಪತ್ತೆಯಾಗಿತ್ತು. ಅದನ್ನು ಕಂಡ ಸ್ಥಳೀಯರು ಪರಿಶೀಲನೆ ನಡೆಸಿದ ವೇಳೆ ಬೈಕ್‌ನಲ್ಲಿ ಬ್ಯಾಂಕ್‌ನ ಪಾಸ್‌ಬುಕ್‌ಗಳು ಪತ್ತೆಯಾಗಿದ್ದವು. ಪಾಸ್‌ಬುಕ್‌ನಲ್ಲಿದ್ದ ಫೋನ್ ನಂಬರ್‌ಗೆ ಕರೆ ಮಾಡಿದ ವೇಳೆ ಪ್ರಮೋದ್ ತಂದೆ ಕರೆ ಸ್ವೀಕರಿಸಿದ್ದು, ನದಿಯ ಬಳಿ ದ್ವಿಚಕ್ರ ವಾಹನ ನಿಂತಿರುವ ಬಗ್ಗೆ ಮಾಹಿತಿ ನೀಡಿದ್ದರು.

ಡಿ.30 ರಿಂದ ಹೇಮಾವತಿ ನದಿಯಲ್ಲಿ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಬುಧವಾರ ಬೆಳಗ್ಗೆ ಪ್ರಮೋದ್ ಶವ ನದಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ