ಕ್ರಿಕೆಟಿಗ ರಾಬಿನ್ ಉತ್ತಪ್ಪ 
ರಾಜ್ಯ

ವಂಚನೆ ಪ್ರಕರಣ: ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ವಿರುದ್ಧದ ವಾರಂಟ್‌ಗೆ ಹೈಕೋರ್ಟ್‌ ತಡೆ

‘ರಾಬಿನ್‌ ಉತ್ತಪ್ಪ ಅವರು, ಸೆಂಟಾರಸ್‌ ಲೈಫ್‌ ಸ್ಟೈಲ್‌ ಬ್ರ್ಯಾಂಡ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಸಹ ಪಾಲುದಾರರಾಗಿದ್ದರು. ಆದರೆ, 2020ರಲ್ಲಿಯೇ ಅವರು ತಮ್ಮ ಪಾಲುದಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಉದ್ಯೋಗಿಗಳ ಇಪಿಎಫ್‌ ಪಾವತಿಸದೆ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ವಿರುದ್ಧ ಜಾರಿಯಾಗಿದ್ದ ಬಂಧನ ವಾರಂಟ್‌ಗೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ ತಡೆ ನಿಡಿದೆ.

ರಾಬಿನ್ ಉತ್ತಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರ ರಜಾಕಾಲದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೇಂದ್ರ ಕಾರ್ಮಿಕ ಇಲಾಖೆ, ಸಹಾಯಕ ಭವಿಷ್ಯ ನಿಧಿ ಆಯುಕ್ತರು ಮತ್ತು ವಸೂಲಿ ಅಧಿಕಾರಿ, ಬೆಂಗಳೂರಿನ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು ಮತ್ತು ವಸೂಲಿ ಅಧಿಕಾರಿ ಹಾಗೂ ಪುಲಿಕೇಶಿ ನಗರ ಠಾಣಾಧಿಕಾರಿಗೆ ನ್ಯಾಯಾಲಯವು ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.

ವಿಚಾರಣೆ ವೇಳೆ ರಾಬಿನ್‌ ಉತ್ತಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವಡಗಿ, ‘ರಾಬಿನ್‌ ಉತ್ತಪ್ಪ ಅವರು, ಸೆಂಟಾರಸ್‌ ಲೈಫ್‌ ಸ್ಟೈಲ್‌ ಬ್ರ್ಯಾಂಡ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಸಹ ಪಾಲುದಾರರಾಗಿದ್ದರು. ಆದರೆ, 2020ರಲ್ಲಿಯೇ ಅವರು ತಮ್ಮ ಪಾಲುದಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ, ಅವರನ್ನು ಪ್ರಕರಣದಲ್ಲಿ ಭಾಗಿಯನ್ನಾಗಿ ಮಾಡಲು ಅವಕಾಶವಿಲ್ಲ. ಹೀಗಾಗಿ, ಅವರ ವಿರುದ್ಧದ ವಸೂಲಿ ನೋಟಿಸ್ ಮತ್ತು ಪುಲಕೇಶಿ ನಗರ ಪೊಲೀಸರು ಹೊರಡಿಸಿರುವ ಬಂಧನದ ವಾರಂಟ್ ಕಾನೂನು ಬಾಹಿರವಾಗಿದ್ದು ಅದನ್ನು ರದ್ದುಪಡಿಸಬೇಕು ಎಂದು ಕೋರಿದರು.

ಸೆಂಟಾರಸ್‌ ಲೈಫ್‌ ಸ್ಟೈಲ್‌ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್‌ ಕಂಪೆನಿಯಲ್ಲಿ ರಾಬಿನ್‌ ಉತ್ತಪ್ಪ 12 ಕೋಟಿ ಹೂಡಿಕೆ ಮಾಡುವ ಮೂಲಕ ಪಾಲುದಾರರಾಗಿದ್ದರು. ಆದರೆ, ಕಂಪನಿ ನಷ್ಟಕ್ಕೆ ಸಿಲುಕಿದೆ ಎಂಬ ಕಾರಣಕ್ಕೆ ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಏತನ್ಮಧ್ಯೆ, ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರರು, ‘ನಮ್ಮ ಸಂಬಳದಲ್ಲಿ ಇಪಿಎಫ್ ಹಣವನ್ನು ಕಡಿತಗೊಳಿಸಲಾಗಿದೆ ಆದರೆ, ಇಪಿಎಫ್ ಹಣವನ್ನು ಪಾವತಿ ಮಾಡಿಲ್ಲ. ಹಣವನ್ನು ಉದ್ಯೋಗಿಗಳ ಖಾತೆಗೆ ಹಾಕದೇ ಒಟ್ಟು 23 ಲಕ್ಷ ವಂಚಿಸಲಾಗಿದೆ’ ಎಂದು ಆರೋಪಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಇಪಿಎಫ್ ಪ್ರಾದೇಶಿಕ ಆಯುಕ್ತರು ಕೋರಿದ್ದ ಕ್ರಮದ ಅನುಸಾರ ಬಂಧನದ ವಾರಂಟ್‌ ಹೊರಡಿಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ