ಸಾಂದರ್ಭಿಕ ಚಿತ್ರ  
ರಾಜ್ಯ

ವಸತಿ ಯೋಜನೆಗಳ ಮೇಲಿನ ಶೇಕಡಾ 18 ಜಿಎಸ್‌ಟಿ: ರದ್ದು ಕೋರಿ ಸದ್ಯದಲ್ಲೇ ಪ್ರಧಾನಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ.

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಕೈಗೊಂಡಿರುವ ವಿವಿಧ ವಸತಿ ಯೋಜನೆಗಳ ಮೇಲಿನ ಶೇ 18ರಷ್ಟು ಜಿಎಸ್‌ಟಿಯನ್ನು ತೆಗೆದುಹಾಕುವಂತೆ ಕೋರಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ ಎಂದು ದೆಹಲಿಯಲ್ಲಿನ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಈ ಕುರಿತು ವಸತಿ ಸಚಿವ ಜಮೀರ್ ಅಹಮದ್ ಜಯಚಂದ್ರ ಅವರಿಗೆ ಮನವಿ ಸಲ್ಲಿಸಿದ ವಸತಿ ಯೋಜನೆಗಳ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಜಯಚಂದ್ರ, ಶೇ.18ರಷ್ಟು ಜಿಎಸ್‌ಟಿ ಜಾರಿಯಾಗಿರುವುದರಿಂದ ಫಲಾನುಭವಿಗಳು ಮನೆ ನಿರ್ಮಾಣಕ್ಕೆ 1.5 ಲಕ್ಷ ರೂಪಾಯಿಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿದ್ದು, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹೊರೆಯಾಗಿದೆ ಎಂದರು.

ರಾಜ್ಯದಲ್ಲಿ 2,865 ಕೊಳೆಗೇರಿಗಳಿದ್ದು, ಅದರಲ್ಲಿ 635 ಬೆಂಗಳೂರಿನಲ್ಲಿವೆ. ಈ ಕೊಳೆಗೇರಿಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ 3,682 ಕೋಟಿ ರೂಪಾಯಿ ಕೇಳಿ ಪ್ರಸ್ತಾವನೆ ಸಲ್ಲಿಸಿದೆ. ಈ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನದಟ್ಟು ಮಾಡಲು ನಿರ್ಧರಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 45,124 ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಅದರಲ್ಲಿ 8,287 ಮನೆಗಳನ್ನು ಪೂರ್ಣಗೊಳಿಸಿದ್ದೇವೆ, 31,626 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದರು.

ರಸ್ತೆ ಸೌಕರ್ಯ, ಚರಂಡಿ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಸಭೆಯಲ್ಲಿ ಈ ಕುರಿತು ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಈ ಸೌಲಭ್ಯ ಕಲ್ಪಿಸಲು 660 ಕೋಟಿ ರೂಪಾಯಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಈ ಮೊತ್ತವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ 171 ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿಪಡಿಸಲು ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಜಮೀರ್ ಅಹಮದ್ ಹೇಳಿದರು. ಕೇಂದ್ರ ಸರ್ಕಾರವು 60:40 ಅನುಪಾತದಲ್ಲಿ ಹಣವನ್ನು ಬಿಡುಗಡೆ ಮಾಡಿದರೆ, ನಾವು ಕಾಲೊನಿಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT