ಸಂಗ್ರಹ ಚಿತ್ರ 
ರಾಜ್ಯ

ಅಂಬೇಡ್ಕರ್ ವಿವಾದ: ಚಾಮರಾಜನಗರ ಬಂದ್'ಗೆ ಮಿಶ್ರ ಪ್ರತಿಕ್ರಿಯೆ

ದಲಿತ ಮಹಾಸಭಾ ಮತ್ತು ಇತರ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾಕಾರರು ನಗರದ ಪಚ್ಚಪ್ಪ ವೃತ್ತದಲ್ಲಿ ಜಮಾಯಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಪ್ರತಿಮೆ, ಭಾವಚಿತ್ರ ಇರಿಸಿ ಧರಣಿ ನಡೆಸಿದರು.

ಮೈಸೂರು: ಸಂಸತ್ತಿನಲ್ಲಿ ಡಾ ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಚಾಮರಾಜನಗರದಲ್ಲಿ ಮಂಗಳವಾರ ಬಂದ್ ಆಚರಿಸಲಾಯಿತು.

ದಲಿತ ಮಹಾಸಭಾ ಮತ್ತು ಇತರ ದಲಿತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾಕಾರರು ನಗರದ ಪಚ್ಚಪ್ಪ ವೃತ್ತದಲ್ಲಿ ಜಮಾಯಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಪ್ರತಿಮೆ, ಭಾವಚಿತ್ರ ಇರಿಸಿ ಧರಣಿ ನಡೆಸಿದರು. ಬೈಕ್ ರ್ಯಾಲಿ, ಪಾದಯಾತ್ರೆ, ರಸ್ತೆ ತಡೆ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದರು.

ಬಂದ್ ಹಿನ್ನೆಲೆ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ ಮುಂತಾದ ಪ್ರಮುಖ ವಾಣಿಜ್ಯ ಪ್ರದೇಶಗಳು ಮತ್ತು ಮಾರುಕಟ್ಟೆ ವಲಯಗಳು ಸಂಪೂರ್ಣ ಸ್ಥಗಿತಗೊಂಡಿದ್ದರೆ, ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಆಟೋರಿಕ್ಷಾಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ಸೇವೆಗಳು ಎಂದಿನಂತೆ ಕಾರ್ಯಾಚರಣೆ ನಡೆಸಿದವು.

ಇನ್ನು ಶಾಲಾ-ಕಾಲೇಜುಗಳ ರಜೆ ನಿರ್ಧಾರವನ್ನು ಆಯಾ ಶಾಲೆ ಮತ್ತು ಕಾಲೇಜುಗಳಿಗೆ ಬಿಡಲಾಗಿತ್ತು. ಕೆಲ ಶಾಲೆಗಳು ರಜೆ ಘೋಷಿಸಿದ್ದು ಕಂಡು ಬಂದಿತ್ತು.

ಪಚ್ಚಪ್ಪ ಸರ್ಕಲ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಿವಿಯೇಷನ್ ರಸ್ತೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಗುಂಡ್ಲುಪೇಟೆ ಸರ್ಕಲ್, ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ಸರ್ಕಲ್, ಡಿವಿಯೇಷನ್ ರಸ್ತೆ ಮೂಲಕ ಪಚ್ಚಪ್ಪ ಸರ್ಕಲ್‌ನಲ್ಲಿ ಅಂತ್ಯಗೊಂಡಿತು. ಕೆಲ ಅಡೆತಡೆಗಳ ಹೊರತು ಪಡಿಸಿದರೆ, ಬಂದ್ ಬಹುತೇಕ ಶಾಂತಿಯುತವಾಗಿತ್ತು, ಯಾವುದೇ ಹಿಂಸಾಚಾರದ ಘಟನೆಗಳು ಕಂಡು ಬರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT