ಸಂಗ್ರಹ ಚಿತ್ರ 
ರಾಜ್ಯ

ಬೀದಿ ನಾಯಿ-ಜಾನುವಾರುಗಳು ಆಸ್ಪತ್ರೆ ಆವರಣ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಸೂಚನೆ

ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆ ಆವರಣದ ಒಳಗೆ ಹಾಗೂ ಹೊರಗೆ ಬೀದಿ ನಾಯಿಗಳು-ಜಾನುವಾರುಗಳು ಪ್ರವೇಶಿಸದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ.

ಆಸ್ಪತ್ರೆಗಳ ಒಳಗೆ ಹಾಗೂ ಆವರಣಗಳನ್ನು ಪ್ರವೇಶಿಸುವ ಬೀದಿ ನಾಯಿಗಳು, ಒಳ ರೋಗಿ, ಹೊರ ರೋಗಿ, ಗರ್ಭಿಣಿಯರು, ತಾಯಿ–ಮಕ್ಕಳಿಗೆ ಅಪಾಯ ಉಂಟುಮಾಡುತ್ತಿರುವುದು ಕೆಲವೆಡೆ ವರದಿಯಾಗುತ್ತಿದೆ. ಆರೋಗ್ಯ ಸಂಸ್ಥೆಗಳು ಅತ್ಯಂತ ಸೂಕ್ಷ್ಮ ಪ್ರದೇಶಗಳಾಗಿದ್ದು, ಆಸ್ಪತ್ರೆಗಳಲ್ಲಿ ಸೋಂಕು ತಡೆಗಟ್ಟಲು ಹಾಗೂ ಸಾರ್ವಜನಿಕರಿಗೆ ಉಂಟಾಗಬಹುದಾದ ಸಂಭವನೀಯ ಅಪಾಯ ತಡೆಗಟ್ಟಲು ಜಾನುವಾರು ಮತ್ತು ಬೀದಿ ನಾಯಿಗಳಿಗೆ ಪ್ರವೇಶ ನಿರ್ಬಂಧಿಸುವ ಅವಶ್ಯಕತೆಯಿದೆ ಎಂದು ತಿಳಿಸಲಾಗಿದೆ.

ಆಸ್ಪತ್ರೆಗಳಲ್ಲಿ ವೈದ್ಯಕೀಯ ತ್ಯಾಜ್ಯ ಮತ್ತು ಆಹಾರ ಪದಾರ್ಥಗಳ ತ್ಯಾಜ್ಯವನ್ನು ಸೂಕ್ತವಾಗಿ ನಿರ್ವಹಿಸದೆ ಇರುವುದೇ ಬೀದಿ ನಾಯಿಗಳು ಆಸ್ಪತ್ರೆಗಳ ಆವರಣ ಪ್ರವೇಶಿಸುವುದಕ್ಕೆ ಪ್ರಮುಖ ಕಾರಣವಾಗಿದೆ. ಈ ಬಗ್ಗೆ ಆರೋಗ್ಯ ಸಂಸ್ಥೆಗಳ ಆಡಳಿತ ಮುಖ್ಯಸ್ಥರು ಅಗತ್ಯ ಕ್ರಮವಹಿಸದೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಚ್ಚರಿಸಲಾಗಿದೆ.

ಜಾನುವಾರುಗಳು ಹಾಗೂ ಬೀದಿ ನಾಯಿಗಳು ಪ್ರವೇಶಿಸದಂತೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆಯೂ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT