ಸಂಗ್ರಹ ಚಿತ್ರ 
ರಾಜ್ಯ

Bengaluru: CCB ಭರ್ಜರಿ ಕಾರ್ಯಾಚರಣೆ; 2.25 ಕೋಟಿ ರೂ ಮೌಲ್ಯದ ಡ್ರಗ್ಸ್‌ ವಶಕ್ಕೆ, ಟ್ಯಾಟೂ ಕಲಾವಿದ ಬಂಧನ

ಖಚಿತ ಮಾಹಿತಿ ಮೇರೆಗೆ ರಕ್ಷಿತ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, 3.55 ಕೆಜಿ ಹೈಡ್ರೋ ಗಾಂಜಾ, 16.65 ಕೆಜಿ ಗಾಂಜಾ, 40 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 130 ಗ್ರಾಂ ಚರಸ್ ಸೇರಿದಂತೆ 2.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದು, ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2.25 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಟ್ಯಾಟೂ ಕಲಾವಿದನೊಬ್ಬನನ್ನು ಬಂಧನಕ್ಕೊಳಪಡಿಸಿದ್ದಾರೆ.

ಯಲಹಂಕದ ರಕ್ಷಿತ್‌(31) ಬಂಧಿತ ಆರೋಪಿ. ಮತ್ತೊಬ್ಬ ಆರೋಪಿ ತವನೀಶ್‌ ಅಲಿಯಾಸ್ ಈಶಾ ತಲೆಮರೆಸಿಕೊಂಡಿದ್ದು, ಈತನಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ರಕ್ಷಿತ್ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, 3.55 ಕೆಜಿ ಹೈಡ್ರೋ ಗಾಂಜಾ, 16.65 ಕೆಜಿ ಗಾಂಜಾ, 40 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 130 ಗ್ರಾಂ ಚರಸ್ ಸೇರಿದಂತೆ 2.5 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ಸದ್ಯ ತಲೆಮರೆಸಿಕೊಂಡಿರುವ ಯಲಹಂಕದ ನಿವಾಸಿ ತವನೀಶ್ ಎಂಬಾತ ರಕ್ಷಿತ್ ಜೊತೆ ಸೇರಿ ಬೇರೆ ರಾಜ್ಯಗಳಿಂದ ಹಾಗೂ ಥಾಯ್ಲೆಂಡ್‌ನಿಂದ ಈ ಮಾದಕ ದ್ರವ್ಯಗಳನ್ನು ತರಿಸಿಕೊಂಡಿದ್ದ ಎನ್ನಲಾಗಿದೆ.

ಇವರಿಬ್ಬರು ಹೊಸ ವರ್ಷದ ಸಂಭ್ರಮಾಚರಣೆಯ ಸಿದ್ಧತೆಗಾಗಿ ಡ್ರಗ್ಸ್ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏತನ್ಮಧ್ಯೆ, ನಗರದಾದ್ಯಂತ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಪೊಲೀಸರು 17 ಆರೋಪಿಗಳನ್ನು ಬಂಧಿಸಿ 13 ಲಕ್ಷ ಮೌಲ್ಯದ 30 ಕೆಜಿ ಗಾಂಜಾ ಮತ್ತು 9.5 ಲಕ್ಷ ಮೌಲ್ಯದ 150 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್