ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹೊಸ ವರ್ಷ ದಿನವೇ ಅಪಘಾತ: ಪ್ರತ್ಯೇಕ ಘಟನೆಗಳಲ್ಲಿ ಮೂವರು ಸಾವು

ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ.

ಅಪಘಾತಕ್ಕೀಡಾದ ಕಾರುಗಳು
Sumana Upadhyaya
Updated On : 1 Jan 2025, 2:15 pm

ಶಿವಮೊಗ್ಗ: ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ.ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.

ಹೊಸ ವರ್ಷದ ಮತ್ತಿನಲ್ಲಿ ಕಾರಿಗೆ ಕಲ್ಲು ಹೊಡೆದು ಬೈಕ್ ಸವಾರ ಪರಾರಿಯಾಗುತ್ತಿದ್ದ. ಇದರಿಂದ ಸಿಟ್ಟಗೆದ್ದ ಕಾರು ಚಾಲಕ ಬೈಕ್ ಚೇಸ್ ಮಾಡಿಕೊಂಡು ಬಂದಿದ್ದ. ಈ ವೇಳೆ ಗಾಯತ್ರಿ ಶಾಲೆ ಬಳಿ ಹಂಪ್ ಕಾಣದೆ ಇಬ್ಬರು ಸವಾರರು ಕಾರು ಮತ್ತು ಬೈಕ್‌ನ್ನು ಹಾರಿಸಿದ್ದರು. ಈ ಹಿನ್ನೆಲೆ ಕಾರು ಪಲ್ಟಿಯಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಕಾರಿನಲ್ಲಿದ್ದ ಇಬ್ಬರು ಹುಡುಗಿಯರು ಪಾರಾಗಿದ್ದಾರೆ.ಸದ್ಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement

ಇನ್ನೋವಾ ಪಲ್ಟಿಯಾಗಿ ಇಬ್ಬರು ದುರ್ಮರಣ: ಇನ್ನೋವಾ ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಮಾಗಡಿಯ ತಾವರೆಕೆರೆ ರಸ್ತೆಯ ಜನತಾ ಕಾಲೋನಿ ಬಳಿ ನಡೆದಿದೆ.ಮೃತರನ್ನು ಬೆಂಗಳೂರು ಮೂಲದ ಮಂಜು (31) ಹಾಗೂ ಕಿರಣ್ (30) ಎಂದು ಗುರುತಿಸಲಾಗಿದೆ. ಕಾರಲ್ಲಿ 8 ಜನ ಸ್ನೇಹಿತರು ಹೊಸ ವರ್ಷದ ಪಾರ್ಟಿ ಮೂಡಲ್ಲಿ ಮುಂಜಾನೆ 3 ಗಂಟೆಗೆ ಟೀ ಕುಡಿಯೋಕೆ ಬೆಂಗಳೂರಿಂದ ಮಾಗಡಿಗೆ ಬಂದಿದ್ದರು. ಟೀ ಕುಡಿದು ವಾಪಾಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ 6 ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನ ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments