ಸಾಂದರ್ಭಿಕ ಚಿತ್ರ 
ರಾಜ್ಯ

ಕೆರೆ ಬಳಿ New year ಪಾರ್ಟಿ: ಇಬ್ಬರು ಯುವಕರು ಜಲಸಮಾಧಿ

ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ.

ಹಾಸನ: ಹೊಸ ವರ್ಷದ ಆಚರಣೆ ಮಾಡುವ ವೇಳೆ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಮೃತಪಟ್ಟವರು.

ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.

ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT