ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಕಳವಳ

ಆದಾಯ ತರುವ ಇಲಾಖೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ವಿನಿಯೋಗಿಸುವ ಇಲಾಖೆಗಳು ಒಗ್ಗಟ್ಟಾಗಿ ಜವಾಬ್ದಾರಿಯಿಂದ ಕೆಲಸ ಮಾಡಿ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಸಿಎಂ ಹೇಳಿದರು.

ಬೆಂಗಳೂರು: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದ್ದರೂ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು.

ಹಿರಿಯ ಐಎಎಸ್, ಐಪಿಎಸ್, ಅರಣ್ಯ ಇಲಾಖೆ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಭ್ರಷ್ಟಾಚಾರ ತಡೆಯುವ ಬದಲು ಭ್ರಷ್ಟಾಚಾರ ಹೆಚ್ಚಾಗುತ್ತಿದೆ. ಭ್ರಷ್ಟಾಚಾರದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದ ಮುಖ್ಯಮಂತ್ರಿ, ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ. "ನಾವೆಲ್ಲರೂ ನಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಿದರೆ, ನಾವು ಗುರಿಯನ್ನು ತಲುಪಬಹುದು ಅಥವಾ ಕನಿಷ್ಠ ಆ ದಿಕ್ಕಿನಲ್ಲಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬಹುದು ಎಂದರು.

ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಪ್ರಾದೇಶಿಕ ಅಸಮತೋಲನವನ್ನು ನಿವಾರಿಸಲು ಹಿರಿಯ ಅಧಿಕಾರಿಗಳ ಸಹಕಾರ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಪ್ರತಿಯೊಬ್ಬರೂ ಬದ್ಧತೆಯಿಂದ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಅಭಿವೃದ್ಧಿಗೆ ಸಮರ್ಪಕ ಅನುದಾನ ನೀಡುತ್ತಿಲ್ಲ ಎಂಬ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದಿನ ಬಿಜೆಪಿ ಸರಕಾರ ಬಜೆಟ್‌ನಲ್ಲಿ ಹಣ ಮೀಸಲಿಡದೆ 2,09,000 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಿದ್ದರಿಂದ ಹೊಸ ಕಾಮಗಾರಿಗಳಿಗೆ ತಮ್ಮ ಬಳಿ ಹಣವಿಲ್ಲ ಎಂದು ಸಿಎಂ ಸ್ಪಷ್ಟ ಪಡಿಸಿದರು. ಟೆಂಡರ್ ಕರೆದು ಏಜೆನ್ಸಿಗಳನ್ನು ನಿಗದಿಪಡಿಸಿ ಹಣ ಮಂಜೂರು ಮಾಡದೆ ಕಾಮಗಾರಿ ಆರಂಭಿಸಿದ್ದಾರೆ, ಇದರಿಂದಾಗಿ 29,000 ಕೋಟಿ ಬಿಲ್ ಬಾಕಿ ಉಳಿದಿದ್ದು ಇದಕ್ಕೆ ಪ್ರಮುಖ ಕಾರಣ ಎಂದು ಸಿದ್ದರಾಮಯ್ಯ ಹೇಳಿದರು.

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದ್ದರೂ ಕೇಂದ್ರದಿಂದ ಅನುದಾನ ಸಮರ್ಪಕವಾಗಿ ಸಿಗುತ್ತಿಲ್ಲ. ಇಷ್ಟೆಲ್ಲ ಇದ್ದರೂ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿದ್ದು, ಮಂಜೂರು ಮಾಡಿದ ಹಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಆದಾಯ ತರುವ ಇಲಾಖೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ವಿನಿಯೋಗಿಸುವ ಇಲಾಖೆಗಳು ಒಗ್ಗಟ್ಟಾಗಿ ಜವಾಬ್ದಾರಿಯಿಂದ ಕೆಲಸ ಮಾಡಿ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಸಿಎಂ ಹೇಳಿದರು.

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ನಂಜುಂಡಪ್ಪ ಸಮಿತಿ ವರದಿ ಆಧರಿಸಿ ಕೈಗೊಂಡಿರುವ ಕ್ರಮಗಳ ಪರಿಶೀಲನೆಗೆ ಅರ್ಥಶಾಸ್ತ್ರಜ್ಞ ಗೋವಿಂದರಾವ್ ನೇತೃತ್ವದಲ್ಲಿ ಸಮಿತಿ ರಚಿಸಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ 35 ಸಾವಿರ ಕೋಟಿ ರೂ.ವ್ಯಯ ಮಾಡಿದೆ ಎಂದು ಸಿಎಂ ಮಾಹಿತಿ ನೀಡಿದರು. ಜೀವನದಲ್ಲಿ ಏರಿಳಿತಗಳಿದ್ದು, ಸವಾಲುಗಳನ್ನು ಎದುರಿಸಲು ಸದಾ ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT