ನೌಶಾದ್ ಬಿಜಾಪುರ 
ರಾಜ್ಯ

The New Indian Express ಪತ್ರಕರ್ತ ನೌಶಾದ್ ಬಿಜಾಪುರ ಸೇರಿ 14 ಮಂದಿಗೆ ಅಭಿವೃದ್ಧಿ- ಪರಿಸರ ಪತ್ರಿಕೋದ್ಯಮ ಪ್ರಶಸ್ತಿ

ವಾರ್ತಾ ಇಲಾಖೆ ಆಯುಕ್ತರ ಅಧ್ಯಕ್ಷತೆಯ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿದೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ನೌಶಾದ್ ಬಿಜಾಪುರ್ ಅವರನ್ನು 2021 ರ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಾರ್ತಾ ಇಲಾಖೆ ಆಯುಕ್ತರ ಅಧ್ಯಕ್ಷತೆಯ ಸಮಿತಿಯು ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ.

ರಾಜ್ಯ ಸರ್ಕಾರವು 2017-2023ರ ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗಾಗಿ 14 ಹೆಸರುಗಳನ್ನು ಪ್ರಕಟಿಸಿದೆ. ಪ್ರಶಸ್ತಿ ಪುರಸ್ಕೃತರು 1 ಲಕ್ಷ ರೂಪಾಯಿ ನಗದು ಪಡೆಯಲಿದ್ದಾರೆ. ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರಲ್ಲಿ ಚಿ.ಜಾ ರಾಜೀವ್ (2017), ದೇವಯ್ಯ ಗುತ್ತೇದಾರ್ (2018), kannadaprabha.com ಅಂಕಣಕಾರ ಗಿರೀಶ್ ಲಿಂಗಣ್ಣ (2019), ಯೋಗೇಶ್ ಎಂಎನ್ (2020), ನೌಶಾದ್ ಬಿಜಾಪುರ (2021), ಸತೀಶ್ ಜಿಟಿ (2022) ಮತ್ತು ಎಸ್ ಗಿರೀಶ್ ಬಾಬು (2023) ಸೇರಿದ್ದಾರೆ.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತರಲ್ಲಿ ವಿಜಯಲಕ್ಷ್ಮಿ ಶಿಬರೂರು (2017), ಬಿಎಂಟಿ ರಾಜೀವ್ (2018), ವಿನೋದ ನಾಯ್ಕ್ (2019), ಮಾಲ್ತೇಶ್ ಅಂಗೂರ (2020), ಸುಧೀರ್ ಶೆಟ್ಟಿ (2021), ಮಲ್ಲಿಕಾರ್ಜುನ್ ಹೊಸಪಾಳ್ಯ (2022) ಮತ್ತು ಆರ್ ಮಂಜುನಾಥ್ (20) ಸೇರಿದ್ದಾರೆ.

ಪ್ರಶಸ್ತಿ ಪುರಸ್ಕೃತರು

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ. ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆಗಳನ್ನು ತಿಳಿಸಿ ಆಶೀರ್ವದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT