ಸಾಂದರ್ಭಿಕ ಚಿತ್ರ  
ರಾಜ್ಯ

ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.

ಗೋಕಾಕ: ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ವಿದ್ಯಾರ್ಥಿಯೊಬ್ಬನಿಗೆ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆ ಗೋಕಾಕ್ ನಗರದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗುರುವಾರ ನಡೆದಿದೆ.

ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ. ಶಾಲೆ ಮುಗಿದ ಬಳಿಕ ನಗರದ ವಾಲ್ಮೀಕಿ ಮೈದಾನಕ್ಕೆ ಬಂದಿದ್ದ 10ನೇ ತರಗತಿ ವಿದ್ಯಾರ್ಥಿಗಳಾದ ರವಿ ಚಿನ್ನವ್ವ, ಅಶೋಕ್ ಕಂಕಣವಾಡಿ, ಸಿದ್ದಾರ್ಥ ಮಟ್ಟಿಕೊಪ್ಪ ಅವರು ಸಹಪಾಠಿ ಪ್ರದೀಪ್ ಬಂಡಿವಡ್ಡರಗೆ ತರಗತಿಯಲ್ಲಿದ್ದ ಬ್ಯಾಗ್ ತರುವಂತೆ ತಿಳಿಸಿದ್ದಾರೆ.

ಇದಕ್ಕೆ ಪ್ರದೀಪ್ ನಿರಾಕರಿಸಿದ್ದು, ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ಮೂವರು ಪ್ರದೀಪ್ ಕುತ್ತಿಗೆ, ಕೈ ಮತ್ತು ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆ.

ರಕ್ತದ ಮಡುವಿನಲ್ಲಿ ನರಳಾಡುತಿದ್ದ ಪ್ರದೀಪ್‌ನನ್ನು ಸ್ಥಳೀಯ ಶಿಕ್ಷಕರು ಗೋಕಾಕ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಗರ ಪೊಲೀಸರು ಆಸ್ಪತ್ರೆಗೆ ದೌಢಾಯಿಸಿ ಹಲ್ಲೆಗೊಳಗಾದವನಿಂದ ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಇದೀಗ ಬಲೆ ಬೀಸಿದ್ದು, ಈ ಸಂಬಂಧ ಗೋಕಾಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!