ರಾಮಲಿಂಗಾ ರೆಡ್ಡಿ ಭೇಟಿಯಾದ ಆಂಧ್ರಪ್ರದೇಶ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ  
ರಾಜ್ಯ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರ ಪ್ರದೇಶದಲ್ಲೂ ಯೋಜನೆ ಜಾರಿಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ!

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಚಂದ್ರಬಾಬು ನಾಯ್ಡು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. 6 ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಾಲ್ಕು ಬಸ್ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ.

ಕರ್ನಾಟಕದ ಸರ್ಕಾರದ 'ಶಕ್ತಿ' ಯೋಜನೆ ಕುರಿತು ಅಧ್ಯಯನ ನಡೆಸಲು ಆಂಧ್ರ ಪ್ರದೇಶದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ನೇತೃತ್ವದ ಸಚಿವರ ನಿಯೋಗ ಇಂದು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಆಂಧ್ರ ಪ್ರದೇಶದ ಸಾರಿಗೆ, ಯುವ ಸಬಲೀಕರಣ ಕ್ರೀಡಾ ಸಚಿವ ಮಂಡಿಪಲ್ಲಿ ರಾಮ ಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣಾ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ನೇತೃತ್ವದ ತಂಡ ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿದರು.

ಆಂಧ್ರ ಪ್ರದೇಶದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ನೇತೃತ್ವದ ಸಚಿವರ ನಿಯೋಗಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಅನ್ಬುಕುಮಾರ್, ಬಿಎಂಟಿಸಿ ಎಂಡಿ ಆರ್ ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಅವರು ಯೋಜನೆ ಕುರಿತು ಮಾಹಿತಿ ನೀಡಿದರು.

ರಾಜ್ಯದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ ಆಂಧ್ರ ಪ್ರದೇಶ ಸಾರಿಗೆ ಸಚಿವರು, ಯೋಜನೆಯು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ಯೋಜನೆ ಮಹಿಳೆಯರು, ವಿದ್ಯಾರ್ಥಿ ಹಾಗೂ ಕಾರ್ಮಿಕರಿಗೆ ಸಾಕಷ್ಟು ಪ್ರಯೋಜನೆ ನೀಡುತ್ತದೆ. ಇದು ಬಡವರ ಪರ ಯೋಜನೆಯಾಗಿದ್ದು, ಆಂಧ್ರ ಪ್ರದೇಶದಲ್ಲೂ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದರು.

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಚಂದ್ರಬಾಬು ನಾಯ್ಡು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. 6 ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು. ಇದೀಗ ಯೋಜನೆ ಜಾರಿಗೆ ಸಿದ್ಧತೆ ಆರಂಭಿಸಿರುವ ಚಂದ್ರಬಾಬು ನಾಯ್ಡು ಸರ್ಕಾರ, ಕಾರ್ಯಸಾಧ್ಯತೆ, ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲು ರಾಜ್ಯಕ್ಕೆ ಭೇಟಿ ನೀಡಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜನ‌ಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜನಪ್ರಿಯ ಗಳಿಸಿರುವ ಯೋಜನೆಯಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT