ಇಡಿ ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ; 30 ಲಕ್ಷ ರೂ ಹೊತ್ತೊಯ್ದ ಖದೀಮರು!

ತಮ್ಮನ್ನು ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದು, ಮನೆಯನ್ನು ಶೋಧಿಸಲು ಆದೇಶವಿದೆ ಎಂದು ಹೇಳಿದ್ದಾರೆ.

ಮಂಗಳೂರು: ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪಟ್ಟಣದ ಉದ್ಯಮಿಯೊಬ್ಬರ ಮನೆಯ ಮೇಲೆ ದಾಳಿ ಮಾಡಿದ ಆರು ಅಪರಿಚಿತ ವ್ಯಕ್ತಿಗಳ ತಂಡ, ಸುಮಾರು 30 ಲಕ್ಷ ರೂಪಾಯಿ ನಗದು ದೋಚಿ, ಐದು ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಜನವರಿ 3ರ ರಾತ್ರಿ ಈ ಘಟನೆ ನಡೆದಿದೆ. ಕೊಳ್ನಾಡು ನಿವಾಸಿ ಹಾಗೂ ಕೃಷಿಕ, ಬೀಡಿ ಉದ್ಯಮಿ ಮೊಹಮ್ಮದ್ ಇಕ್ಬಾಲ್(27) ನೀಡಿದ ದೂರಿನ ಪ್ರಕಾರ ಆರೋಪಿಗಳು ತಮಿಳುನಾಡು ನೋಂದಣಿಯ ವಾಹನದಲ್ಲಿ ರಾತ್ರಿ 8.10ರ ಸುಮಾರಿಗೆ ಅವರ ನಿವಾಸಕ್ಕೆ ಬಂದಿದ್ದಾರೆ.

ತಮ್ಮನ್ನು ತಾವು ಇಡಿ ಅಧಿಕಾರಿಗಳು ಎಂದು ಪರಿಚಯಿಸಿಕೊಂಡಿದ್ದು, ಮನೆಯನ್ನು ಶೋಧಿಸಲು ಆದೇಶವಿದೆ ಎಂದು ಹೇಳಿದ್ದಾರೆ. ಮನೆ ಪ್ರವೇಶಿಸಿದ ನಂತರ, ಅವರು ಶೋಧ ನಡೆಸುವ ಮೊದಲು ಕುಟುಂಬ ಸದಸ್ಯರಿಂದ ಐದು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿದ್ದಾರೆ.

''ತಪಾಸಣೆ ವೇಳೆ, ವ್ಯವಹಾರದ ಉದ್ದೇಶದಿಂದ ಬೀರುದಲ್ಲಿಟ್ಟಿದ್ದ 25-30 ಲಕ್ಷ ರೂ. ನಗದನ್ನು ತೆಗೆದುಕೊಂಡು ಹೋಗಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ಮನೆಯಲ್ಲಿ ಇಡಲು ಅನುಮತಿ ಇಲ್ಲ. ಹೀಗಾಗಿ ಬಂಧಿಸುವುದಾಗಿ ಬೆದರಿಕೆ ಹಾಕಿದರು ಎಂದು ಇಕ್ಬಾಲ್ ಹೇಳಿರುವುದಾಗಿ" ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸರಿಸುಮಾರು ರಾತ್ರಿ 10.30ಕ್ಕೆ, ವಶಪಡಿಸಿಕೊಂಡ ನಗದುಗೆ ಸೂಕ್ತ ದಾಖಲೆಗಳನ್ನು ಒದಗಿಸಿ, ಬೆಂಗಳೂರಿನ ಕಚೇರಿಯಿಂದ ಹಣವನ್ನು ಸಂಗ್ರಹಿಸಬಹುದು ಎಂದು ಕುಟುಂಬಕ್ಕೆ ಭರವಸೆ ನೀಡಿ ನಿವಾಸದಿಂದ ತೆರಳಿದರು ಎಂದು ಅಧಿಕಾರಿ ಹೇಳಿದ್ದಾರೆ.

ಘಟನೆಯ ಬಗ್ಗೆ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿದ ನಂತರ, ಇಡಿ ಅಧಿಕಾರಿಗಳಂತೆ ಸೋಗಿನಲ್ಲಿ ಬಂದವರು ವಂಚಕರು ಎಂದು ಅರಿತುಕೊಂಡ ನಂತರ ಇಕ್ಬಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) 2023ರ ಕಲಂ 319(2) ಮತ್ತು 318(4)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದ್ದು, ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT