ಮೈಸೂರು/ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ನಂತರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಅವರು ಆಪರೇಷನ್ ಗೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆನ್ನುನೋವು ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದ ಅವರು ಆಪರೇಷನ್ ಮಾಡಿಸಬೇಕೆ, ಬೇಡವೇ ಎಂಬ ಗೊಂದಲದಲ್ಲಿದ್ದರು. ಈಗ ಆಪರೇಷನ್ ಮಾಡಿಸೋದು ಅನಿವಾರ್ಯ ಆಗಿದೆ. ಅವರಿಗೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ, ಬೇರೆ ದಾರಿ ಕಾಣದೆ ಆಪರೇಷನ್ಗೆ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಕ್ರಾಂತಿ ಹೊತ್ತಿನಲ್ಲಿ ಆಪರೇಷನ್? ಸಂಕ್ರಾತಿ ವೇಳೆಗೆ ದರ್ಶನ್ ಆಪರೇಷನ್ ಮಾಡಿಸಿಕೊಳ್ಳಲಿದ್ದಾರೆ. ಮೈಸೂರಿನಲ್ಲಿಯೇ ಆಪರೇಷನ್ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ದರ್ಶನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಅಜಯ್ ಹೆಗಡೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿದುಬಂದಿದೆ.