ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ!

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು.

ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ.

ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದ್ದು, ಈ ಹಿನ್ನೆಲೆ ಹಾಲಿನ ದರ ಲೀಟರಕ್'ಗೆ ರೂ.8 ರಿಂದ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ. ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ತಿಳಿಸಿದರು.

ನಿರ್ಧಾರ ಯಾವಾಗ ತೆಗೆದುಕೊಳ್ಳಲಾಗುತ್ತದೆ ಎಂಬುದರ ಕುರಿತ ಪ್ರಶ್ನೆಗೆ ಉತ್ತರಿಸಿ, ಶೀಘ್ರದಲ್ಲೇ ತೆಗೆದುಕೊಳ್ಳಲಾಗುತ್ತದೆ. ಏಕೆಂದರೆ ಬಜೆಟ್‌ಗೂ ಮುನ್ನ ರಾಜ್ಯ ಸರ್ಕಾರವು ತನ್ನ ಆದಾಯದ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕಿದೆ ಎಂದರು.

ಇತ್ತೀಚೆಗೆ, ರಾಮನಗರ ಜಿಲ್ಲೆಯ ಮಾಗಡಿಯ ಕೆಲವು ಹೈನುಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಾಲಿನ ಬೆಲೆಯನ್ನು ಲೀಟರ್‌ಗೆ 5 ರೂ. ಹೆಚ್ಚಿಸಬೇಕೆಂದು ಒತ್ತಾಯಿಸಿದ್ದರು.

ಹಾಲಿನ ಬೆಲೆಯನ್ನು ಆಗಸ್ಟ್ 2023 ರಲ್ಲಿ 3 ರೂ. ಹೆಚ್ಚಿಸಲಾಗಿತ್ತು. ನಂತರ ಲೀಟರ್‌ಗೆ 39 ರೂ.ನಿಂದ 42 ರೂ.ಗೆ ಹೆಚ್ಚಿಸಲಾಯಿತು. ಜೂನ್ 2024 ರಲ್ಲಿ, ಮತ್ತೆ 2 ರೂ. ಹೆಚ್ಚಿಸಲಾಯಿತು, ಬಳಿಕ ಹೆಚ್ಚುವರಿಯಾಗಿ 50 ಮಿಲಿ ನೀಡಲಾಯಿತು.

ಒಟ್ಟಾರೆಯಾಗಿ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಕೊಂಡುಕೊಳ್ಳುವವರು ಜೇಬು ಮುಟ್ಟಿ ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಕೆಎಂಎಫ್ ಅಡಿಯಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿದ್ದು, ರಾಜ್ಯದಲ್ಲಿ ಸುಮಾರು 40 ಲಕ್ಷ ಡೈರಿ ರೈತರಿದ್ದಾರೆ. ದಿನಕ್ಕೆ ಸರಾಸರಿ ಒಂದು ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಇದು ಹೈನುಗಾರಿಕೆಯಲ್ಲಿ ಕರ್ನಾಟಕವನ್ನು ಅಗ್ರದಲ್ಲಿರುವ ರಾಜ್ಯವನ್ನಾಗಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್