ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಆರೋಪಿ ಪೊಲೀಸ್ ಅಧಿಕಾರಿಯನ್ನು ಇಂದು ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ರಾಮಚಂದ್ರಪ್ಪ
Lingaraj Badiger
Updated On : 4 Jan 2025, 7:27 pm

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ ಅವರನ್ನು ಅಮಾನತು ಮಾಡಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ನಿನ್ನೆ ಸಂಜೆ ಪೊಲೀಸರು ಬಂಧಿಸಿದ್ದರು.

ಆರೋಪಿ ಪೊಲೀಸ್ ಅಧಿಕಾರಿಯನ್ನು ಇಂದು ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

Advertisement

Also Read

ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪ ಬಂಧನ

ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ.

ಮಹಿಳೆ ನೀಡಿದ ದೂರಿನ ಮೇರೆಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸೆಕ್ಸನ್ 68, 75, 79 ಅತ್ಯಾಚಾರ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments