ಪ್ರತಿಭಟನೆಯಲ್ಲಿ ಬಿ.ವೈ. ವಿಜಯೇಂದ್ರ 
ರಾಜ್ಯ

ಶಿವಮೊಗ್ಗ: ಬಿಜೆಪಿ ಪ್ರತಿಭಟನೆ; ಮೃತ ಬಾಣಂತಿಯರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರಕ್ಕೆ ಒತ್ತಾಯ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆಯಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತ್ತು ಪಡೆಯಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರ ಶಾಪ ತಟ್ಟಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಒಂದು ವೇಳೆ ಮನುಷ್ಯತ್ವ ಹೊಂದಿದ್ದರೆ ಅಥವಾ ತಮ್ಮ ಸ್ಥಾನದ ಮೇಲೆ ಗೌರವಿದ್ದರೆ ಕೂಡಲೇ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ತಲಾ ರೂ. 25 ಲಕ್ಷ ಪರಿಹಾರ ಘೋಷಿಸಿಸಬೇಕು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ರಾಜೀನಾಮೆ ಪಡೆಯಬೇಕು. ತಾಯಿ ಕಳೆದುಕೊಂಡ ಮಕ್ಕಳನ್ನು ಸರ್ಕಾರ ದತ್ತು ಪಡೆಯಬೇಕು ಎಂದು ಆಗ್ರಹಿಸಿದರು.

ಬಾಣಂತಿಯರ ಸಾವು ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದ ವಿಜಯೇಂದ್ರ, ಮೃತ ಬಾಣಂತಿಯರ ಕುಟುಂಬಗಳಿಗೆ ನ್ಯಾಯ ದೊರಕಿಸಲು ಬಿಜೆಪಿ ಹೋರಾಟ ಮಾಡಲಿದ್ದು, ಸರ್ಕಾರ ಎಚ್ಚೆತ್ತು, ವಿಳಂಬವಿಲ್ಲದೆ ಅವರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

ಹೊಸ ಪಕ್ಷದ ಹೆಸರು ಘೋಷಿಸಿದ ಶಶಿಕಲಾ; ಮೈತ್ರಿ ಮಾಡಿಕೊಂಡು ಚುನಾವಣೆಗೆ ಸ್ಪರ್ಧೆ

Khamenei ಸತ್ತ... ಉತ್ತರಾಧಿಕಾರಿ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಇದು ಇರಾನ್ ಗೇ ಗೊತ್ತಿಲ್ಲ!

'ಹಸಿವಾಗ್ತಿದೆ.. ಪಕೋಡ ತಗೊಂಡ್ ಬಾ': ಬಸ್ ನಿಲ್ದಾಣದಲ್ಲಿ ಪತಿಯ ಕಳುಹಿಸಿ ಲವರ್ ಜೊತೆ ನವವಿವಾಹಿತೆ ಪರಾರಿ!

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆ.ಎಚ್ ಮುನಿಯಪ್ಪ!

SCROLL FOR NEXT