‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನದಲ್ಲಿ ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ನಿತ್ಯಾನಂದ ರಾಯ್, ಸಂಸದ ಯದುವೀರ ಒಡೆಯರ್ ಮತ್ತಿತರರು 
ರಾಜ್ಯ

ಮೈಸೂರು: ಸಂಪರ್ಕ ಭಾಷೆಯಾಗಿ ಹಿಂದಿ ಬೆಳೆಸಬೇಕು, ವಿದೇಶಿ ಭಾಷೆ ಬಳಸಬಾರದು- ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್.

ಮೈಸೂರು: ಭಾರತದ ಎಲ್ಲ ಭಾಷೆಗಳ ಮೇಲೆ ಅಭಿಮಾನ ಇರಿಸಿಕೊಂಡೇ ಸಂಪರ್ಕ ಭಾಷೆಯಾಗಿ ಹಿಂದಿಯನ್ನು ಬೆಳೆಸಬೇಕಿದೆ. ವಿದೇಶಿ ಭಾಷೆಯನ್ನು ಸಂಪರ್ಕ ಭಾಷೆಯಾಗಿ ಬಳಸಬಾರದು ಎಂದು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್ ಪ್ರತಿಪಾದಿಸಿದ್ದಾರೆ.

ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗವು ಶನಿವಾರ ಆಯೋಜಿಸಿದ್ದ ‘ದಕ್ಷಿಣ ಹಾಗೂ ನೈರುತ್ಯ ವಿಭಾಗದ ಅಧಿಕೃತ ಭಾಷಾ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲರು, ಯಾವುದೇ ವಿದೇಶಿ ಭಾಷೆಯನ್ನು ಕಲಿಯಬಹುದು. ಆದರೆ, ನಮ್ಮ ದೇಶದ ಭಾಷೆಗಳನ್ನು ಪ್ರೀತಿಸಬೇಕು. ದ್ವೇಷಿಸಬಾರದು ಎಂದರು. ‌

ದೇಶದ ಸಂಸ್ಕೃತಿಯ ರಾಯಭಾರಿಯಾಗಿರುವ ಎಲ್ಲ ಭಾಷೆಗಳನ್ನು ಕಲಿಯಲು ಮುಂದಾದಾಗ ಮಾತ್ರವೇ ವೈವಿಧ್ಯತೆಯನ್ನು ಅರಿಯಲು ಸಾಧ್ಯವಾಗುತ್ತದೆ. ಭಾರತೀಯ ಸಮಾಜದ ಅಭಿವ್ಯಕ್ತಿಯೇ ಭಾಷೆಯಾಗಿದೆ’ ಎಂದು ತಿಳಿಸಿದರು.

‘ಸಶಕ್ತ ಪರಂಪರೆ ಹೊಂದಿರುವ ದೇಶದ ಅನೇಕತೆಯಲ್ಲಿಯೇ ಏಕತೆಯಿದೆ. ನಮ್ಮ ಸಂಸ್ಕೃತಿಯು ಇತಿಹಾಸ ಹಾಗೂ ಜ್ಞಾನದ ಆಧಾರದ ಮೇಲೆ ನಿಂತಿದೆ. ಹೀಗಾಗಿಯೇ ಹೆಚ್ಚು ವಿದೇಶಿಗರು ದೇಶದ ಜ್ಞಾನ ಭಂಡಾರ ಅರಿಯಲು ಇಲ್ಲಿಗೆ ಬರುತ್ತಾರೆ. ಜ್ಞಾನಿಗಳಾದ ಭಾರತೀಯರು ಸಮಾಜದ ಅಭಿವೃದ್ಧಿಯ ಕಡೆಗೆ ಯೋಚಿಸಬೇಕು’ ಎಂದು ಸಲಹೆ ನೀಡಿದರು.

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್ ಮಾತನಾಡಿ, ಹಿಂದಿಯನ್ನು ಸಂವಾದದ ಭಾಷೆಯನ್ನಾಗಿ ಮಾಡಲು ಸಂಕಲ್ಪ ಮಾಡಿದ್ದೇವೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಭಾಷೆಗಳನ್ನು ಮಾತನಾಡುವ ದಕ್ಷಿಣ ಭಾರತದಲ್ಲಿ ಹಿಂದಿ ಸಹ ಒಂದು ಪ್ರಮುಖ ಮಾಧ್ಯಮವಾಗಿದೆ, ಇದು ಜನರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂವಾದದಲ್ಲಿ ಭಾಗವಹಿಸಲು ಅವಕಾಶವನ್ನು ಕೂಡಾ ನೀಡುತ್ತದೆ. ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಮಾಧ್ಯಮವೂ ಆಗಿದೆ ಎಂದು ಹೇಳಿದರು.

ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ, ಕೇರಳ, ತಮಿಳುನಾಡು, ಪಾಂಡಿಚೇರಿ, ಲಕ್ಷದ್ವೀಪದ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕ್‌ಗಳಲ್ಲಿ ಭಾಷಾ ಅನುಷ್ಠಾನಗೊಳಿಸಿದ 32 ಉತ್ತಮ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಿ, ಪ್ರಮಾಣ ಪತ್ರ ನೀಡಲಾಯಿತು.

ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತಿತರರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT