ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: BBMP ಕಸದ ಲಾರಿ ಹರಿದು ಇಬ್ಬರ ಸಹೋದರಿಯರ ದುರ್ಮರಣ

ಅಪಘಾತದ ಬೆನ್ನಲ್ಲೇ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದಲ್ಲಿ ಶನಿವಾರ ನಡೆದಿದೆ.

ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ ಇರ್ಫಾನ್ ಮೃತ ಸಹೋದರಿಯರು. ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಹೋದರಿಯರು, ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬೆನ್ನಲ್ಲೇ ಹೆಣ್ಣೂರು ಸಂಚಾರಿ ಪೊಲೀಸರು ಕಸದ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್