ರಾಜ್ಯ

ಗಢಗಢ ನಡುಗುತ್ತಿದೆ ಕರ್ನಾಟಕ: ವಿಜಯಪುರದಲ್ಲಿ 9 ಡಿಗ್ರಿ ಸೆಲ್ಸಿಯಸ್ ಗೆ ತಾಪಮಾನ ಕುಸಿತ

ಕರ್ನಾಟಕದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತೀವ್ರತರವಾದ ಶೀತ ಅಲೆಗಳ ಸ್ಥಿತಿಯ ಬಗ್ಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರು: ಕರ್ನಾಟಕದ ಬಹುತೇಕ ಭಾಗಗಳಲ್ಲಿ, ವಿಶೇಷವಾಗಿ ಉತ್ತರ-ಒಳಾಂಗಣ ಕರ್ನಾಟಕಕ್ಕೆ ಶೀತ ಅಲೆ ಅಪ್ಪಳಿಸುವ ಎಚ್ಚರಿಕೆಯನ್ನು ಭಾರತದ ಹವಾಮಾನ ಇಲಾಖೆ (IMD) ನೀಡಿದೆ.

ಕರ್ನಾಟಕದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತೀವ್ರತರವಾದ ಶೀತ ಅಲೆಗಳ ಸ್ಥಿತಿಯ ಬಗ್ಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಎಚ್ಚರಿಕೆಯನ್ನು ನೀಡಿದೆ. ಕಲಬುರಗಿ ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುತ್ತದೆ.

ನಿನ್ನೆ ಶನಿವಾರ ವಿಜಯಪುರದಲ್ಲಿ ಕನಿಷ್ಠ 9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಹಾಸನದಲ್ಲಿ 10.3 ಡಿಗ್ರಿ ಸೆಲ್ಸಿಯಸ್ ಮತ್ತು ಚಿಂತಾಮಣಿಯಲ್ಲಿ 10.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಮತ್ತು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಿದೆ.

ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಂದಿನ 2-3 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಲಿದೆ. ಗುಡ್ಡಗಾಡು ಪ್ರದೇಶಗಳಿಂದ ಉತ್ತರ ದಿಕ್ಕಿನ ಮಾರುತಗಳು ಬೀಸುತ್ತಿರುವುದೇ ಇದಕ್ಕೆ ಕಾರಣ. ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಯಾವುದೇ ಶೀತ ಅಲೆಗಳ ಮುನ್ನೆಚ್ಚರಿಕೆ ನೀಡಿಲ್ಲ, ಆದರೆ ಕನಿಷ್ಠ ತಾಪಮಾನದಲ್ಲಿ ಕುಸಿತವನ್ನು ಅನುಭವಿಸುತ್ತಿರುವ ಪ್ರದೇಶವನ್ನು ತಳ್ಳಿಹಾಕುವಂತಿಲ್ಲ ಎಂದು IMD (ಬೆಂಗಳೂರು) ಉಸ್ತುವಾರಿ ನಿರ್ದೇಶಕ ಎನ್ ಪುವಿಯರಸನ್ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಗಾಳಿಯ ಮಾದರಿಯು ಮತ್ತೆ ಬದಲಾಗುತ್ತದೆ ಮತ್ತು ಪೂರ್ವದ ಕಡೆಗೆ ಮಾರುತಗಳು ಮೇಲುಗೈ ಸಾಧಿಸಲು ಪ್ರಾರಂಭವಾಗುತ್ತದೆ, ಇದರಿಂದಾಗಿ ಕನಿಷ್ಠ ತಾಪಮಾನವು ಏರಿಕೆಯಾಗಲು ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ ತಾಪಮಾನವು ಕುಸಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ