ಸಾಂದರ್ಭಿಕ ಚಿತ್ರ 
ರಾಜ್ಯ

Bidadi: ವಿದ್ಯುತ್​​ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ ಸ್ಪೋಟ: ಐವರು ಕಾರ್ಮಿಕರಿಗೆ ಗಂಭೀರ ಗಾಯ

ಬಿಡದಿಯ ಭೈರಮಂಗಲ ಕ್ರಾಸ್​ನಲ್ಲಿರೋ ವಿಧ್ಯುತ್​​ ಉತ್ಪಾದನ ಘಟಕದಲ್ಲಿ ಅವಘಡ ಸಂಭವಿಸಿದ್ದು. ಬಾಯ್ಲರ್​ಸ್ಪೋಟಗೊಂಡ ಪರಿಣಾಮಕ್ಕೆ ಐವರು ಕಾರ್ಮಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಬೆಂಗಳೂರು: ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದಿದೆ.

ಬಿಡದಿಯ ಭೈರಮಂಗಲ ಕ್ರಾಸ್​ನಲ್ಲಿರೋ ವಿಧ್ಯುತ್​​ ಉತ್ಪಾದನ ಘಟಕದಲ್ಲಿ ಅವಘಡ ಸಂಭವಿಸಿದ್ದು. ಬಾಯ್ಲರ್​ಸ್ಪೋಟಗೊಂಡ ಪರಿಣಾಮಕ್ಕೆ ಐವರು ಕಾರ್ಮಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಉಮೇಶ್, ತರುಣ್, ಅಮಲೇಶ್, ಸಂತೂನ್ ಮತ್ತು ಲಖನ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಉತ್ತರ ಭಾರತದ ವಿವಿಧ ಭಾಗಗಳಿಂದ ಬಂದವರಾಗಿದ್ದು, 30 ರಿಂದ 35 ವರ್ಷದ ಆಸುಪಾಸಿನವರಾಗಿದ್ದಾರೆ.

ಗಾಯಾಳು ಕಾರ್ಮಿಕರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಣ ತ್ಯಾಜ್ಯದಿಂದ ವಿದ್ಯುತ್ ಹೊರತೆಗೆಯಲು ಬಿಬಿಎಂಪಿ ಸಹಯೋಗದೊಂದಿಗೆ ಖಾಸಗಿ ಕಾರ್ಖಾನೆಯಲ್ಲಿ ಬೆಳಿಗ್ಗೆ 4.30 ರ ಸುಮಾರಿಗೆ ಐವರು ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಕಾರ್ಖಾನೆಯಲ್ಲಿ 100 ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಾರೆ, ಆದರೆ, ಶನಿವಾರ ಸಂಜೆ ಕೇವಲ ಐವರು ಕೆಲಸ ಮಾಡುತ್ತಿದ್ದರು. ಬಾಯ್ಲರ್ ಅನ್ನು ಸಂಪೂರ್ಣವಾಗಿ ಯಂತ್ರಗಳಿಂದ ನಿಯಂತ್ರಿಸಲಾಗುತ್ತದೆ. ಆದರೆ, ಘಟನಾ ದಿನದಂದು ಯಂತ್ರದಲ್ಲಿ ಏನೋ ಸಿಲುಕಿಕೊಂಡಿದ್ದು, ಇದರಿಂದ ಯಂತ್ರ ಕೆಲಸ ಮಾಡುವುದನ್ನು ನಿಲ್ಲಿಸಿತ್ತು. ಬಳಿಕ ಐವರು ಕಾರ್ಮಿಕರು ಸಮಸ್ಯೆಯನ್ನು ಹಸ್ತಚಾಲಿತವಾಗಿ ಸರಿಪಡಿಸಲು ಪ್ರಯತ್ನಿಸಿದ್ದು, ಈ ವೇಳೆ ಬಾಯ್ಲರ್ ಸ್ಫೋಟಗೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಐವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ನಿರ್ಲಕ್ಷ್ಯ ತೋರಿದ ಕಾರ್ಖಾನೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT