ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಪೆಂಟಾವಲೆಂಟ್ ಲಸಿಕೆ ಪಡೆದ ಎರಡು ನವಜಾತ ಶಿಶುಗಳ ಸಾವು!

ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಕುಣಿಗಲ್ (ತುಮಕೂರು): ನಗರದ ಆರೋಗ್ಯ ಕೇಂದ್ರದಲ್ಲಿ ಗುರುವಾರ ಮತ್ತು ಶುಕ್ರವಾರ ಲಸಿಕೆ (ಪೆಂಟಾವಲೆಂಟ್‌ ವ್ಯಾಕ್ಸಿನ್‌) ಪಡೆದ ಎರಡು ನವಜಾತ ಶಿಶುಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ವಿನೋದ್ ಮತ್ತು ರಂಜಿತಾ ದಂಪತಿಯ ಪುತ್ರಿ ಎರಡು ತಿಂಗಳ ಹೆಣ್ಣು ಮಗುವಿಗೆ ಕೋಟೆಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗಿದ್ದು, ಶುಕ್ರವಾರ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮತ್ತೊಂದು ಪ್ರಕರಣದಲ್ಲಿ, ಭಕ್ತರಹಳ್ಳಿಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆದ ಎರಡೂವರೆ ತಿಂಗಳ ಗಂಡು ಮಗು ಕೂಡ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಇದರ ಬೆನ್ನಲ್ಲೇ ರಾಜ್ಯ ನೋಡಲ್ ಅಧಿಕಾರಿ ಡಾ. ಸುಧೀರ್ ನಾಯಕ್, ಜಿಲ್ಲಾ ನೋಡಲ್ ಅಧಿಕಾರಿ ಡಾ. ಮೋಹನ್ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಮರಿಯಪ್ಪ ಸೇರಿದಂತೆ ತಜ್ಞರ ತಂಡ ಶನಿವಾರ ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದರು.

ಬಳಿಕ ವಿಶ್ಲೇಷಣೆಗಾಗಿ ಲಸಿಕೆ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ವರದಿಗಳು ಲಭ್ಯವಾದ ನಂತರ ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪೆಂಟಾವಲೆಂಟ್ ಲಸಿಕೆಯನ್ನು ಮಕ್ಕಳನ್ನು ಐದು ಗಂಭೀರ ಕಾಯಿಲೆಗಳಾದ ಡಿಫ್ತೀರಿಯಾ, ಟೆಟನಸ್, ನಾಯಿಕೆಮ್ಮು (ವೂಪಿಂಗ್ ಕೆಮ್ಮು), ಹೆಪಟೈಟಿಸ್ ಬಿ ಮತ್ತು ಹಿಮೋಫಿಲಸ್ ಇನ್ಫ್ಲುಯೆನ್ಸ ಟೈಪ್ ಬಿ ರೋಗಳನ್ನು ತಡೆಗಟ್ಟುವಲ್ಲಿ ನೆರವಾಗಲಿದೆ. ಆದರೆ ಲಸಿಕೆ ಪಡೆದ ಶಿಶುಗಳ ಸಾವಿಗೆ ಕಾರಣ ಏನೆಂಬುದು ತನಿಖೆಯಿಂದ ಬಹಿರಂಗವಾಗಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT