ದಲೈಲಾಮಾ 
ರಾಜ್ಯ

ಟಿಬೆಟಿಯನ್ 14ನೇ ಧರ್ಮಗುರು ದಲೈಲಾಮಾ ಬೈಲಕುಪ್ಪೆಗೆ ಆಗಮಿನ; 1 ತಿಂಗಳು ವಾಸ್ತವ್ಯ

ಹಿಮಾಚಲ ಪ್ರದೇಶದ ಧರ್ಮಶಾಲಾ ಟಿಬೆಟಿಯನ್ ಕೇಂದ್ರದಲ್ಲಿ ತೀವ್ರ ಶೀತ ವಾತಾವರಣದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿಗಾಗಿ ಬೈಲಕುಪ್ಪೆಗೆ ಆಗಮಿಸಿರುವುದಾಗಿ ಟಿಬೆಟಿಯನ್ ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ತಾನಿಮ್ ಅವರು ಹೇಳಿದ್ದಾರೆ.

ಮಡಿಕೇರಿ: ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಆಗಮಿಸಿದ್ದು, ಶಿಬಿರದಲ್ಲಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ ಟಿಡಿಎಲ್‌ ಶಾಲಾ ಮೈದಾನಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದರು. ಈ ವೇಳೆ ದಲೈ ಲಾಮಾ ಅವರನ್ನು ಮೈಸೂರು ಜಿಲ್ಲಾಡಳಿತ ಮತ್ತು ಶಿಬಿರದ ಪ್ರತಿನಿಧಿಗಳು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದರು. ದಲೈಲಾಮಾ ಅವರು ಶಿಬಿರದಲ್ಲಿರುವ ತಶಿಲೊಂಪೊ ಬೌದ್ಧ ದೇವಾಲಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಹಿಮಾಚಲ ಪ್ರದೇಶದ ಧರ್ಮಶಾಲಾ ಟಿಬೆಟಿಯನ್ ಕೇಂದ್ರದಲ್ಲಿ ತೀವ್ರ ಶೀತ ವಾತಾವರಣದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿಗಾಗಿ ಬೈಲಕುಪ್ಪೆಗೆ ಆಗಮಿಸಿರುವುದಾಗಿ ಟಿಬೆಟಿಯನ್ ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ತಾನಿಮ್ ಅವರು ಹೇಳಿದ್ದಾರೆ.

ದಲೈ ಲಾಮಾ ಇತ್ತೀಚೆಗೆ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೈಲಕುಪ್ಪೆಗೆ ಆಗಮಿಸಿದ್ದಾರೆಂದು ತಿಳಿದುಬಂದಿದೆ,

ಎಂಟು ವರ್ಷಗಳಲ್ಲಿ ದಲೈಲಾಮಾ ಅವರು ಬೈಲಕುಪ್ಪೆ ಶಿಬಿರಕ್ಕೆ 26ನೇ ಬಾರಿ ಭೇಟಿ ನೀಡಿದ್ದಾರೆ. ಈ ಬಾರಿಯ ಭೇಟಿಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಮೂಲಗಳು ದೃಢಪಡಿಸಿವೆ. ಮೈಸೂರು ಜಿಲ್ಲಾ ಪೊಲೀಸರು ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್