ಸಿಎಂ ಸಿದ್ದರಾಮಯ್ಯ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಮತ್ತಿತರರು 
ರಾಜ್ಯ

BIKKS 2025: ಮಾರ್ಚ್ 1 ರಿಂದ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; 9 ಕೋಟಿ ರೂ ವೆಚ್ಚದಲ್ಲಿ ಆಯೋಜನೆ

'ಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.

ಬೆಂಗಳೂರು: ರಾಜಧಾನಿ ಬೆಂಗಳೂರನಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.

ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.

ಒರಾಯನ್ ಮಾಲ್ ನಲ್ಲಿ 11 ಪ್ರದರ್ಶನಗಳಿರಲಿದ್ದು, ಸುಚಿತ್ರಾ ಫಿಲ್ಮಂ ಸೂಸೈಟಿ ಹಾಗೂ ಡಾ. ಅಂಬರೀಷ್ ಆಡಿಟೋರಿಯಂನಲ್ಲಿ ಒಂದೊಂದು ಪ್ರದರ್ಶನವಿರಲಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. ಸುಮಾರು ರೂ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಚಲನಚಿತ್ರೋತ್ಸವದ ರಾಯಭಾರಿನ್ನು ಸಮಿತಿ ನಿರ್ಧರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 1 ರಂದು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರೆ. ಕನ್ನಡ ಚಿತ್ರರಂಗವನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕಾಗಿ 110 ಎಕರೆ ಜಮೀನನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಇದನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಧಾನಪರಿಷತ್ತಿಗೆ ಸಿನಿಮಾ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ನಾಮ ನಿರ್ದೇಶನ ಮಾಡುವ ಕುರಿತು ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT