ಬಿಬಿಎಂಪಿ ಕಚೇರಿ 
ರಾಜ್ಯ

ಬೆಂಗಳೂರು: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಬಿಡುಗಡೆ, ಒಟ್ಟು 1.02 ಕೋಟಿ ಮತದಾರರು

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸೋಮವಾರ ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಿದ ಅವರು 1,02,64,714 ಮತದಾರರಲ್ಲಿ 52,80,287 ಪುರುಷರು, 49,82,589 ಮಹಿಳೆಯರು ಮತ್ತು 1,838 ತೃತೀಯ ಲಿಂಗಿಗಳು ಇದ್ದಾರೆ ಎಂದರು.

ನಗರದ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ www.ceokarnataka.kar.nic.in -- ಮತ್ತು BBMP ವೆಬ್‌ಸೈಟ್ www.bbmp.gov.in ಗಳಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದು.

ಮೊಬೈಲ್ ಫೋನ್‌ನಲ್ಲಿ VHA (ಮತದಾರರ ಸಹಾಯವಾಣಿ ಅಪ್ಲಿಕೇಶನ್) ಅಥವಾ ವೆಬ್ ಪೋರ್ಟಲ್ voters.eci.gov.in ನಲ್ಲಿಯೂ ಮಾಹಿತಿ ಪಡೆಯಬಹುದು. e-EPIC ಡೌನ್‌ಲೋಡ್ ಮಾಡಿಕೊಂಡು, ಮತಗಟ್ಟೆ ಮತ್ತು ಮತದಾನದ ಶೇಕಡಾವಾರು ಮಾಹಿತಿಯಂತಹ ಇತರ ಮಾಹಿತಿಯನ್ನು ಪಡೆಯಬಹುದು. ನಗರದ 1.02 ಕೋಟಿ ಮತದಾರರ ಪೈಕಿ 95,391 ಯುವ ಮತದಾರರಿದ್ದಾರೆ ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

2,294 ಅನಿವಾಸಿ ಭಾರತೀಯ ಮತದಾರರಿದ್ದು, 1,712 ಸೇವಾ ಮತದಾರರು ಮತ್ತು 32,505 ವಿಶೇಷ ಸಾಮರ್ಥ್ಯದ ಮತದಾರರಿದ್ದಾರೆ. ಸಾರ್ವಜನಿಕರು ವೆಬ್ ಪೋರ್ಟಲ್ ಅಥವಾ ಆ್ಯಪ್‌ನಲ್ಲಿ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಬಹುದು. ಯಾವುದೇ ಬದಲಾವಣೆಗಳನ್ನು ಮಾಡಬೇಕಾದರೆ, ನಮೂನೆ 6, 7 ಮತ್ತು 8 ಇತ್ಯಾದಿಗಳನ್ನು ಬಳಸಿಕೊಂಡು ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಗಿರಿನಾಥ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2026 ರಲ್ಲಿ "ರಾಜಕೀಯ ಬಡ್ತಿ": ಗೃಹ ಸಚಿವ ಪರಮೇಶ್ವರ ಹೇಳಿಕೆ ಹಿಂದಿನ ಮರ್ಮ ಏನು?

'ಬಿಗ್ ಬಾಸ್ ತೆಲುಗು ಸೀಸನ್ 9' ಗೆದ್ದ ಸಿಆರ್‌ಪಿಎಫ್ ಕಾನ್‌ಸ್ಟೆಬಲ್ ಜರ್ನಿಯೇ ರೋಚಕ..!

' ತು ಕ್ಯಾ ಘಂಟಾ ಹೋಕೆ ಆಯಾ ಹೈ? ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯ ವರ್ಗಿಯ! Video ವೈರಲ್

Switzerlandನ ಕ್ರಾನ್ಸ್–ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು

ಪುಟಿನ್ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ: ವಿಡಿಯೋ ಬಿಡುಗಡೆ ಮಾಡಿದ ರಷ್ಯಾ, ಝೆಲೆನ್ಸ್ಕಿ ಇನ್ನು ಬಂಕರ್‌ನಲ್ಲೇ ಎಂದು ಶಪಥ..!

SCROLL FOR NEXT