ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ ನಿಂದ ಹೊರಟ ಮೆಟ್ರೋ ರೈಲು 
ರಾಜ್ಯ

Namma Metro Yellow Line: ಏಪ್ರಿಲ್ ತಿಂಗಳೊಳಗೆ ಆರಂಭ; ಮೊದಲಿಗೆ ಮೂರು ಸೆಟ್ ರೈಲು ಸಂಚಾರ

19.15 ಕಿ.ಮೀ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗಕ್ಕೆ ಎರಡನೇ ರೈಲು ಆಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಮೂರನೆಯದು ನಿರೀಕ್ಷಿಸಲಾಗಿದೆ. ರೈಲುಗಳು ಆರಂಭದಲ್ಲಿ 30-ನಿಮಿಷಗಳ ಅಂತರದಲ್ಲಿ ಸಂಚಾರ ನಡೆಸಲಿವೆ.

ಬೆಂಗಳೂರು: ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ ದೇಶೀಯವಾಗಿ ತಯಾರಿಸಿದ ಚಾಲಕ ರಹಿತ ರೈಲು ಬೆಂಗಳೂರಿಗೆ ಹೊರಟಿದ್ದು, ಮಾರ್ಚ್ ಅಂತ್ಯದ ವೇಳೆಗೆ ಅಥವಾ ಏಪ್ರಿಲ್ ಆರಂಭದಲ್ಲಿ ಹಳದಿ ಮಾರ್ಗವನ್ನು ಪ್ರಾರಂಭಿಸುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಘೋಷಿಸಿದೆ.

ಇದು 19.15 ಕಿ.ಮೀ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗಕ್ಕೆ ಎರಡನೇ ರೈಲು ಆಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಮೂರನೆಯದು ನಿರೀಕ್ಷಿಸಲಾಗಿದೆ. ರೈಲುಗಳು ಆರಂಭದಲ್ಲಿ 30-ನಿಮಿಷಗಳ ಅಂತರದಲ್ಲಿ ಸಂಚಾರ ನಡೆಸಲಿವೆ. ಹೆಚ್ಚುವರಿ ರೈಲುಗಳನ್ನು ಪರಿಚಯಿಸುತ್ತಿದ್ದಂತೆ ಇದು ಕಡಿಮೆಯಾಗುತ್ತದೆ ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ 2025ರ ಮಧ್ಯದಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲು BMRCL ನಿರ್ಧರಿಸಿತ್ತು. ಆದರೆ, ಈ ಮಾರ್ಗಕ್ಕೆ ತುಂಬಾ ಬೇಡಿಕೆಯಿರುವುದರಿಂದ ಆದಷ್ಟು ಬೇಗನೆ ಕಾರ್ಯಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚೀನಾ ರೈಲ್ವೇ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (CRRC)ನಿಂದ ಮೊದಲ ಚಾಲಕ ರಹಿತ ರೈಲು ಫೆಬ್ರವರಿ 14, 2024 ರಂದು ಚೆನ್ನೈ ಬಂದರಿನ ಮೂಲಕ ಬೆಂಗಳೂರನ್ನು ತಲುಪಿತ್ತು. ಆದಾಗ್ಯೂ, ಅದರ ಭಾರತೀಯ ಪಾಲುದಾರರಾದ ಟಿಟಾಗಢ ರೈಲ್ ಸಿಸ್ಟಮ್ಸ್ ಮೊದಲ ರೈಲನ್ನು ಕಳುಹಿಸಲು ವಿಫಲವಾದ್ದರಿಂದ ಈ ಮಾರ್ಗದ ಉದ್ಘಾಟನೆ ವಿಳಂಬವಾಗುತ್ತಿದೆ. ಈ ರೈಲು ಜನವರಿ 20 ರೊಳಗೆ ಆಗಮಿಸುವ ನಿರೀಕ್ಷೆಯಿದೆ.

ರೈಲುಗಳ ನಡುವಿನ ಘರ್ಷಣೆಯ ಸಿಮ್ಯುಲೇಶನ್ ಸೇರಿದಂತೆ ವ್ಯಾಪಕವಾದ ಪರೀಕ್ಷೆಯನ್ನು ನಡೆಸಬೇಕಾಗಿದೆ. ಈ ಪ್ರಕ್ರಿಯೆಯು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಮತ್ತು ಫೆಬ್ರವರಿ ಮೊದಲ ವಾರದೊಳಗೆ ಅದನ್ನು ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಫೆಬ್ರವರಿ ಅಂತ್ಯದ ವೇಳೆಗೆ ಮೂರನೇ ರೈಲನ್ನು ತಲುಪಿಸಲಾಗುವುದು ಎಂದು ಟಿಟಾಗಢ ಭರವಸೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್ ಆರಂಭದಲ್ಲಿ ತಪಾಸಣೆಗಾಗಿ ಮೆಟ್ರೋ ರೈಲು ಸುರಕ್ಷತೆಯ ಆಯುಕ್ತರನ್ನು ಸಂಪರ್ಕಿಸಲು ಯೋಜಿಸುತ್ತಿದ್ದು, ಮಾರ್ಚ್ ಅಂತ್ಯ ಅಥವಾ ಏಪ್ರಿಲ್ ಆರಂಭದಲ್ಲಿ ವಾಣಿಜ್ಯ ಕಾರ್ಯಾಚರಣೆಗಳನ್ನು ಪ್ರಾರಂಭಿಸುತ್ತೇವೆ, ಲಕ್ನೋ ಮೂಲದ ರೈಲು ವಿನ್ಯಾಸ ಮತ್ತು ಗುಣಮಟ್ಟ ಸಂಸ್ಥೆಯು ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಪ್ರಮಾಣೀಕರಣವನ್ನು ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಮಾರ್ಚ್ ಅಂತ್ಯದ ವೇಳೆಗೆ ಕಾರ್ಯಾರಂಭಕ್ಕೆ ಪ್ರಯತ್ನಿಸಲಾಗುತ್ತಿದ್ದು, ಉನ್ನತ ಬಿಎಂಆರ್‌ಸಿಎಲ್ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ಅದು ಸಾಧ್ಯ ಎಂದು ಹೇಳಿದ್ದಾರೆ. ಉದ್ಘಾಟನೆಗೆ ದಿನಾಂಕ ನಿಗದಿಗೆ ಪ್ರಧಾನ ಮಂತ್ರಿ ಕಾರ್ಯಾಲಯ ಸಂಪರ್ಕಿಸಲಾಗುವುದು ಎಂದರು.

ಏಪ್ರಿಲ್ ಅಂತ್ಯದ ವೇಳೆಗೆ ಇನ್ನೂ ಎರಡು ರೈಲು ಸೆಟ್‌ಗಳನ್ನು ತಲುಪಿಸುತ್ತೇವೆ. ಕಂಪನಿಯು ಉತ್ಪಾದನೆಯನ್ನು ಹೆಚ್ಚಿಸಲಿದ್ದು, ಸೆಪ್ಟೆಂಬರ್ 2025 ರ ವೇಳೆಗೆ ತಿಂಗಳಿಗೆ ಎರಡು ರೈಲುಗಳನ್ನು ತಲುಪಿಸುತ್ತದೆ. BMRCL 2019 ರಲ್ಲಿ CRRC ಯೊಂದಿಗೆ 216 ಕೋಚ್‌ಗಳಿಗೆ 1,578 ಕೋಟಿ ರೂಪಾಯಿಗಳಿಗೆ ಒಪ್ಪಂದ ಮಾಡಿಕೊಂಡಿದ್ದು, 12 ಕೋಚ್‌ಗಳನ್ನು ಪಡೆದುಕೊಂಡಿದೆ ಎಂದು ಟಿಟಾಗಢ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT