ಮುಖ್ಯಮಂತ್ರಿ ಸಿದ್ದರಾಮಯ್ಯ  
ರಾಜ್ಯ

ಅನುದಾನ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಮುಖ್ಯ ಕಾರ್ಯದರ್ಶಿಗೆ ಸಿಎಂ ಖಡಕ್ ಸೂಚನೆ

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳಿಗೆ ಮಂಜೂರಾದ ಹಣವನ್ನು ಖರ್ಚು ಮಾಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಸರಕಾರ ನಿಗಮಗಳಿಗೆ 446 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಅದರಲ್ಲಿ ಕೇವಲ 260 ಕೋಟಿ ರೂ.ಗಳನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಖರ್ಚು ಮಾಡಲಾಗಿದೆ. ಶೀಘ್ರದಲ್ಲೇ ಹಣಕಾಸು ವರ್ಷ ಮುಗಿಯಲಿದೆ. 2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,377 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದುವರೆಗೆ 3,631 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಈ ಹಣ ಕೂಡ ಪೂರ್ತಿ ಖರ್ಚು ಮಾಡಿಲ್ಲ. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ ರೂ., ಭೋವಿ ನಿಗಮದಲ್ಲಿ 107 ಕೋಟಿ ರೂ. ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡಿಲ್ಲ. ಈ ಸಂಬಂಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಅಮಾನತು ಮಾಡಿ ಎಂದು ಖಡಕ್ ಸೂಚನೆ ನೀಡಿದರು.

ಮಾರ್ಚ್‌ ಅಂತ್ಯದವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು. ಇದರಿಂದ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ವರ್ಷದ ಅಂತ್ಯದವರೆಗೆ ವಿದ್ಯಾರ್ಥಿ ವೇತನ ಪಾವತಿಯನ್ನು ಬಾಕಿಯುಳಿಸಬಾರದು. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷ ಸೆಪ್ಟಂಬರ್‌ ಒಳಗಾಗಿ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನವನ್ನು ನವೆಂಬರ್‌ ಅಂತ್ಯದ ಒಳಗಾಗಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಆಧಾರ್‌ ಆಗದಿರುವ ಕಾರಣಕ್ಕೆ ವಿದ್ಯಾರ್ಥಿ ವೇತನದಲ್ಲಿ ವಿಳಂಬವಾಗಬಾರದು. ಎಲ್ಲಾ ವಿದ್ಯಾರ್ಥಿಗಳಿಗೆ ಆಧಾರ್‌ ಮಾಡಿಸಲು ಕ್ರಮ ಕೈಗೊಳ್ಳಬೇಕು. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನಕ್ಕೆ 164 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ಕೇವಲ 105 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ 230 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ.

ಎಲ್ಲಾ ಹೋಬಳಿಗಳಲ್ಲಿ ವಸತಿ ಶಾಲೆಗಳ ಸ್ಥಾಪನೆ ಸರ್ಕಾರದ ಗುರಿಯಾಗಿದೆ. ಈ ವರ್ಷ 20 ಹೊಸ ವಸತಿ ಶಾಲೆಗಳನ್ನು ಆರಂಭಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 841 ವಸತಿ ಶಾಲೆಗಳು ಇವೆ. ಇನ್ನು 92 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಬೇಕಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಇದನ್ನು ಪೂರ್ಣಗೊಳಿಸಬೇಕು.

ಹೊಸದಾಗಿ ಆರಂಭಿಸಲಾಗಿರುವ ಎಲ್ಲಾ 20 ವಸತಿ ಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು. ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಪೌಷ್ಟಿಕಾಂಶ ಸೇವನೆಯ ಮೇಲೆ ನಿಗಾ ಇಡುವ ವ್ಯವಸ್ಥೆ ಆಗಬೇಕು. ಎಲ್ಲಾ ಮಂಜೂರಾದ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಶಿಕ್ಷಕರಿಗೆ ನಿರಂತರ ತರಬೇತಿ ನೀಡಬೇಕು. ಮತ್ತು ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT